October 15, 2026
Thursday, October 15, 2026
spot_img

ತಮಿಳುನಾಡು ಚುನಾವಣೆಗೆ ಬಿಜೆಪಿಯಿಂದ ಮಾಸ್ಟರ್ ಪ್ಲಾನ್: ಗೆದ್ದರೆ ಮಹಿಳೆಯರಿಗೆ 2,000, ಮನೆಗೆ ಉಚಿತ ಎಲ್‌ಪಿಜಿ ಘೋಷಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ಚುನಾವಣಾ ಕಣ ರಂಗೇರುತ್ತಿದ್ದು, ಅಧಿಕಾರಕ್ಕೇರಲು ಭರ್ಜರಿ ಪ್ರಚಾರ ನಡೆಸುತ್ತಿರುವ ಬಿಜೆಪಿಯು ಇಂದು ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ತಮಿಳುನಾಡಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ವಾರ್ಷಿಕ 3 ಉಚಿತ ಎಲ್‌ಪಿಜಿ ಸಿಲಿಂಡರ್‌ಗಳು ನೀಡುವುದಾಗಿ ಘೋಷಿಸಿದ್ದು, ಜೊತೆಗೆ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ಪ್ರತಿ ಮನೆಗೆ ಒಂದು ಬಾರಿ 10,000 ರೂ. ನೀಡುವುದಾಗಿ ಭರವಸೆ ನೀಡಿದೆ.

ಪ್ರಮುಖ ದೇವಾಲಯಗಳಲ್ಲಿ ಪ್ರತಿದಿನ ಎರಡು ಗಂಟೆಗಳ ದರ್ಶನ ಸ್ಥಳಗಳನ್ನು ಸ್ಥಳೀಯ ನಿವಾಸಿಗಳಿಗೆ ಮೀಸಲಿಡುವುದು ಮತ್ತು ತಿರುಪರಾನುಕುಂದ್ರಂ ಬೆಟ್ಟದ ಮೇಲೆ ದೀಪ ಹಚ್ಚುವುದು ಸೇರಿದಂತೆ ಕಾರ್ತಿಗೈ ದೀಪ ಆಚರಣೆಗಳ ಮುಂದುವರಿಕೆಯನ್ನು ಸಹ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಲಾಗಿದೆ.

ಅದೇ ರೀತಿ ರೈತರಿಗೆ ಕೇಂದ್ರ ಸರಕಾರ ನೀಡುವ 6000 ಸಾವಿರ ಜೊತೆಗೆ ರಾಜ್ಯದಿಂದಲೂ 3,000 ರೂ. ಹೆಚ್ಚುವರಿ ಬೆಂಬಲ ನೀಡುವುದಾಗಿ ಘೋಷಿಸಿದ್ದು, ಜಲ್ಲಿಕಟ್ಟು ಕ್ರೀಡೆಯಲ್ಲಿ ಭಾಗವಹಿಸುವವರು ಸಾವನ್ನಪ್ಪಿದರೆ 10 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಾರೆ.

ತಮಿಳುನಾಡಿನಲ್ಲಿ ಏಪ್ರಿಲ್ 23 ರಂದು ಮತದಾನ ನಡೆಯಲಿದ್ದು, ಮತ ಎಣಿಕೆ ಮೇ 4ರಂದು ನಡೆಯಲಿದೆ..

Must Read