April 14, 2026
Tuesday, April 14, 2026
spot_img

ತಮಿಳುನಾಡಿನಲ್ಲಿ ಗೆದ್ದರೆ ರೈತರ ಬೆಳೆ ಸಾಲ ಮನ್ನಾ: ನಟ ವಿಜಯ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ಚುನಾವಣಾ ಕಾವು ರಂಗೇರುತ್ತಿದ್ದು, ದಿನೇ ದಿನೇ ವಿವಿಧ ಪಕ್ಷಗಳು ಗೆಲುವಿಯಾಗಿ ರಣತಂತ್ರವನ್ನು ರೂಪಿಸುತ್ತಿದ್ದು, ಇದರ ನಡುವೆ ಗೆದ್ದರೆ ರೈತರಿಗೆ ಬೆಳೆ ಸಾಲ ಮನ್ನಾ ಮಾಡುವುದಾಗಿ ಟಿವಿಕೆ ಪಕ್ಷದ ಅಧ್ಯಕ್ಷ ನಟ ವಿಜಯ್ ಘೋಷಣೆ ಮಾಡಿದ್ದಾರೆ.

ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ವಿಜಯ್, ಈ ಬಾರಿಯ ಪಕ್ಷ ಅಧಿಕಾರಕ್ಕೆ ಬಂದರೆ ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಸಣ್ಣ ರೈತರ ಬೆಳೆ ಸಾಲವನ್ನು ಮನ್ನಾ ಮಾಡಲಾಗುವುದು. ಅದೇ ರೀತಿ ಐದು ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವವರ ಶೇ. 50 ರಷ್ಟು ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಇದರ ಜೊತೆಗೆ ರಾಜ್ಯದಲ್ಲಿ ಭತ್ತಕ್ಕೆ ಪ್ರತಿ ಕ್ವಿಂಟಲ್‌ಗೆ 3,500 ರೂ. ಮತ್ತು ಕಬ್ಬಿಗೆ ಪ್ರತಿ ಟನ್‌ಗೆ 4,500 ರೂ. ನೀಡುವುದಾಗಿ ಘೋಷಣೆ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !