October 15, 2026
Thursday, October 15, 2026
spot_img

ಬಂಗಾಳದಲ್ಲಿ ಬಾಬ್ರಿ ಮಸೀದಿ ನಿರ್ಮಾಣ ಮಾಡಲು ಬಿಜೆಪಿ ಬಿಡುವುದಿಲ್ಲ: ದೀದಿ ನಾಡಲ್ಲಿ ಗುಡುಗಿದ ಅಮಿತ್ ಶಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳ ಚುನಾವಣೆಗೆ ಬಿರುಸಿನ ಪ್ರಚಾರ ನಡೆಯುತ್ತಿದ್ದು, ಇಂದು ಗಂಗಾರಾಮಪುರ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಭರ್ಜರಿ ಮತಬೇಟೆ ನಡೆಸಿದರು.

ಈ ವೇಳೆ ಮಾತನಾಡಿದ ಶಾ, ಬಂಗಾಳದಲ್ಲಿ ಬಾಬ್ರಿ ಮಸೀದಿ ನಿರ್ಮಾಣ ಮಾಡಲು ಬಿಜೆಪಿ ಬಿಡುವುದಿಲ್ಲ ಎಂದು ಗುಡುಗಿದ್ದಾರೆ.

ಇತ್ತೀಚೆಗೆ ಆಮ್‌ ಜನತಾ ಉನ್ನಾಯನ್‌ ಪಾರ್ಟಿ ಮುಖ್ಯಸ್ಥ ಹುಮಾಯೂನ್‌ ಕಬೀರ್‌ ಮುರ್ಷಿದಾಬಾದ್‌ನಲ್ಲಿ ಬಾಬ್ರಿ ಮಸೀದಿ ನಿರ್ಮಾಣ ಮಾಡುವುದಾಗಿ ಹೇಳಿಕೆ ನೀಡಿದ್ದರು. ಈ ಮಾತಿಗೆ ಖಡಕ್ ಸಂದೇಶ ನೀಡಿದ ಶಾ, ಹುಮಾಯೂನ್‌ ಕಬೀರ್‌ ಸಿಎಂ ಮಮತಾ ಬ್ಯಾನರ್ಜಿ ಅವರ ಏಜೆಂಟ್‌ ರೀತಿ ವರ್ತಿಸುತ್ತಿದ್ದಾರೆ. ಇಬ್ಬರು ಜೊತೆ ಸೇರಿ ಮಸೀದಿ ನಿರ್ಮಿಸಲು ಯೋಜಿಸುತ್ತಿದ್ದಾರೆ. ಆದರೆ ಬಂಗಾಳದಲ್ಲಿ ಬಾಬ್ರಿ ಮಸೀದಿ ನಿರ್ಮಾಣಕ್ಕೆ ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.

ಶತಮಾನಗಳ ಬಳಿಕ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲಾಯಿತು. ಇಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಿದ ಬಿಜೆಪಿ, ಬಂಗಾಳದಲ್ಲಿ ಯಾವುದೇ ಕಾರಣಕ್ಕೂ ಬಾಬ್ರಿ ಮಸೀದಿ ನಿರ್ಮಾಣ ಮಾಡಲು ಅವಕಾಶ ನೀಡುವುದಿಲ್ಲ ಎಂದು ಅಮಿತ್‌ ಶಾ ಎಚ್ಚರಿಕೆ ನೀಡಿದ್ದಾರೆ.

Must Read