April 15, 2026
Wednesday, April 15, 2026
spot_img

WEATHER | ರಾಜ್ಯದಲ್ಲಿ ಮುಂದಿನ 5 ದಿನ ಹೀಟ್ ವೇವ್ ಎಚ್ಚರಿಕೆ: 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಹವಾಮಾನದಲ್ಲಿ ದಿಢೀರ್ ಬದಲಾವಣೆ ಕಂಡುಬಂದಿದ್ದು, ಮಳೆಯ ವಾತಾವರಣದ ನಂತರ ಇದೀಗ ಬೇಸಿಗೆಯ ಬಿಸಿಲು ಮತ್ತಷ್ಟು ತೀವ್ರವಾಗಿದೆ.

ಹವಾಮಾನ ಇಲಾಖೆ ಮುಂದಿನ ಐದು ದಿನಗಳ ಕಾಲ ಹೀಟ್ ವೇವ್ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದು, ಉತ್ತರ ಹಾಗೂ ಕರಾವಳಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ:

ವಿಶೇಷವಾಗಿ ಕಲಬುರಗಿಯಲ್ಲಿ ಈಗಾಗಲೇ 42 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಜನಜೀವನದ ಮೇಲೆ ಬಿಸಿಲಿನ ಪ್ರಭಾವ ಹೆಚ್ಚಾಗಿದೆ. ಬೆಂಗಳೂರು ಕೂಡ ಈ ಬಿಸಿಗಾಳಿಯ ಪರಿಣಾಮದಿಂದ ಹೊರತಾಗಿಲ್ಲ. ನಗರದಲ್ಲಿ ಮುಂದಿನ ಕೆಲವು ದಿನಗಳಲ್ಲಿ ತಾಪಮಾನ 36 ರಿಂದ 38 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದ್ದು, ವಾರದ ಆರಂಭದಲ್ಲಿ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಮುಂದಿನ ಐದು ದಿನಗಳ ಕಾಲ ಬಿಸಿಲಿನ ತೀವ್ರತೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಜನರು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ವೈದ್ಯರು ಮತ್ತು ಹವಾಮಾನ ಇಲಾಖೆ ಮನವಿ ಮಾಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !