April 15, 2026
Wednesday, April 15, 2026
spot_img

180ಕ್ಕೂ ಹೆಚ್ಚು ಅಪ್ರಾಪ್ತ ವಯಸ್ಕರಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿ ಅಂದರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಹಾರಾಷ್ಟ್ರದ ಅಮರಾವತಿಯಲ್ಲಿ 180 ಅಪ್ರಾಪ್ತ ವಯಸ್ಕ ಬಾಲಕಿಯರಿಗೆ ಕಿರುಕುಳ ನೀಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.

ಈ ವ್ಯಕ್ತಿಯನ್ನು ಪರತ್ವಾಡ ನಗರದ ನಿವಾಸಿ ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ ಎಂದು ಗುರುತಿಸಲಾಗಿದೆ. ಈತ 180 ಅಪ್ರಾಪ್ತ ವಯಸ್ಕ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈತನ ಫೋನ್‌ನಲ್ಲಿ 350 ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದ.

ಬಿಜೆಪಿ ಸಂಸದರೊಬ್ಬರು ಈ ಬಗ್ಗೆ ದೂರು ನೀಡಿದ್ದು, ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಈತ ಹುಡುಗಿಯರನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡು ಮುಂಬೈ ಹಾಗೂ ಪುಣೆಗೆ ಕರೆದುಕೊಂಡು ಹೋಗುತ್ತಿದ್ದ. ನಂತರ ವಿಡಿಯೋ ಶೂಟ್‌ ಮಾಡಿ ಬ್ಲಾಕ್‌ ಮೇಲ್‌ ಮಾಡುತ್ತಿದ್ದ.

ವೇಶ್ಯಾವಾಟಿಕೆ ಮಾಡಿ ಎಂದು ಒತ್ತಾಯಿಸುತ್ತಿದ್ದ ಎಂದು ಆರೋಪಿಸಲಾಗಿದೆ. ವೇಶ್ಯಾವಾಟಿಕೆಗೆ ಒಪ್ಪದ ಕೆಲ ಹುಡುಗಿಯರ ವಿಡಿಯೋಗಳನ್ನು ಈತ ಆನ್‌ಲೈನ್‌ನಲ್ಲಿ ಹಂಚಿಕೊಂಡಿದ್ದಾನೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !