ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೆನ್ನೈನಲ್ಲಿ ನಡೆದ ಐಪಿಎಲ್ 2026ರ ಪಂದ್ಯದಲ್ಲಿ ಸೋಲಿನ ನೋವಿನ ಜೊತೆಗೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಮತ್ತೊಂದು ದೊಡ್ಡ ಶಾಕ್ ಎದುರಾಗಿದೆ. ತಂಡದ ನಾಯಕ ಅಜಿಂಕ್ಯ ರಹಾನೆಗೆ ಬಿಸಿಸಿಐ 12 ಲಕ್ಷ ದಂಡ ವಿಧಿಸಿದ್ದು, ಈ ಸುದ್ದಿ ಕೆಕೆಆರ್ ಶಿಬಿರದಲ್ಲಿ ಆತಂಕ ಹೆಚ್ಚಿಸಿದೆ.
ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಕೆಕೆಆರ್ ತಂಡ ನಿಗದಿತ ಸಮಯದಲ್ಲಿ ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲವಾಯಿತು. ನಿಧಾನಗತಿಯ ಓವರ್‌ರೇಟ್ ಕಾಯ್ದುಕೊಂಡ ಹಿನ್ನೆಲೆಯಲ್ಲಿ ಐಪಿಎಲ್ ನಿಯಮಾವಳಿಯ ಪ್ರಕಾರ ನಾಯಕ ಅಜಿಂಕ್ಯ ರಹಾನೆಗೆ ದಂಡ ವಿಧಿಸಲಾಗಿದೆ. ಇದು ಈ ಸೀಸನ್‌ನಲ್ಲಿ ತಂಡದ ಮೊದಲ ಉಲ್ಲಂಘನೆಯಾಗಿರುವುದರಿಂದ 12 ಲಕ್ಷ ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.
ಇದನ್ನೂ ಓದಿ:
ಪಂದ್ಯದ ವಿಚಾರಕ್ಕೆ ಬಂದರೆ, ಗುರಿ ಬೆನ್ನಟ್ಟಿದ ಕೆಕೆಆರ್ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು. ಫಿನ್ ಅಲೆನ್ ಕೇವಲ 1 ರನ್‌ಗೆ ಔಟಾದರೆ, ಸುನಿಲ್ ನರೈನ್ 24 ರನ್ ಗಳಿಸಿ ಪೆವಿಲಿಯನ್ ಸೇರಿದರು. ಮಧ್ಯಮ ಕ್ರಮಾಂಕದಲ್ಲೂ ಬ್ಯಾಟರ್‌ಗಳು ನಿರೀಕ್ಷಿತ ಪ್ರದರ್ಶನ ನೀಡದ ಕಾರಣ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 160 ರನ್ ಮಾತ್ರ ಸೇರಿಸಿತು.
ಇದರಿಂದ ಚೆನ್ನೈ 32 ರನ್‌ಗಳ ಜಯ ದಾಖಲಿಸಿತು. ಈಗಾಗಲೇ ಈ ಆವೃತ್ತಿಯಲ್ಲಿ ಗೆಲುವಿನ ಖಾತೆ ತೆರೆಯದ ಕೆಕೆಆರ್‌ಗೆ ಈ ಸೋಲು ಮತ್ತು ದಂಡ ಎರಡೂ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿವೆ. ಮುಂದಿನ ಪಂದ್ಯದಲ್ಲಿ ಗುಜರಾತ್ ವಿರುದ್ಧ ಗೆಲುವಿನ ಒತ್ತಡ ಮತ್ತಷ್ಟು ಹೆಚ್ಚಾಗಿದೆ.



