October 11, 2026
Sunday, October 11, 2026
spot_img

ಜೀಪಿಗೆ ಟಿಪ್ಪರ್‌ ಡಿಕ್ಕಿ ಹೊಡೆಸಿ, ಗುಂಡು ಹಾರಿಸಿ ಗ್ರಾಮ ಪಂಚಾಯತಿ ಮಾಜಿ ಸದಸ್ಯನ ಮರ್ಡ*ರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿಜಯಪುರದ ರಿಯಲ್‌ ಎಸ್ಟೇಟ್‌ ಉದ್ಯಮಿ, ಗ್ರಾಮ ಪಂಚಾಯತಿಯ ಮಾಜಿ ಸದಸ್ಯನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

ಅಲಿಯಬಾದ್‌ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಗೊಡಂದಡ್ಡಿ ಗ್ರಾಮದ ನಿವಾಸಿ ರಾಜು ಬಾಪು ಖರೆ ಚಲಿಸುತ್ತಿದ್ದ ಜೀಪಿಗೆ ಟಿಪ್ಪರ್‌ ಡಿಕ್ಕಿ ಹೊಡೆಸಿ ನಂತರ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ. ಕೊಲೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ತನಿಖೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಟಿಪ್ಪರ್​ನಲ್ಲಿ ಬಂದಿದ್ದ ದುಷ್ಕರ್ಮಿಗಳು ಮೊದಲು ಥಾರ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಬಳಿಕ ಟಿಪ್ಪರ್​ನಿಂದ ಇಳಿದ ಆರೋಪಿಗಳು ಕಾರಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಕಾರ್ ಡೋರ್ ಓಪನ್ ಆಗದಿದ್ದಕ್ಕೆ ಕಲ್ಲು ಎತ್ತಿ ಹಾಕಿದ್ದಾರೆ. ರಾಜು ಖರೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ಎಸ್​ಪಿ ಲಕ್ಷ್ಮಣ ನಿಂಬರಗಿ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Must Read