April 15, 2026
Wednesday, April 15, 2026
spot_img

ಪಂಜಾಬ್ ನಲ್ಲಿ ಭೀಕರ ಬಸ್ ಅಪಘಾತ: ಐವರ ಸಾವು, 15 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಜಾಬ್‌ನ ಫತೇಹ್‌ಗಢ ಸಾಹಿಬ್ ಜಿಲ್ಲೆಯಲ್ಲಿ ಬುಧವಾರ ಬೆಳಗಿನ ಜಾವ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ಕನಿಷ್ಠ 15 ಮಂದಿ ಗಾಯಗೊಂಡಿದ್ದಾರೆ. ಬಸ್ಸಿ ಪಠಾಣಾ ಸಮೀಪ ಈ ದುರ್ಘಟನೆ ಸಂಭವಿಸಿದ್ದು, ವೇಗವಾಗಿ ಸಾಗುತ್ತಿದ್ದ ಪ್ರಯಾಣಿಕರ ಬಸ್ ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಳಿ ಮರಕ್ಕೆ ಡಿಕ್ಕಿ ಹೊಡೆದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್‌ನಲ್ಲಿ ಹಲವರು ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಘಟನೆಯ ತಕ್ಷಣ ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ ಗಾಯಾಳುಗಳನ್ನು ಹೊರತೆಗೆದು ಸಮೀಪದ ಆಸ್ಪತ್ರೆಗೆ ಸಾಗಿಸಿದರು.

ಇದನ್ನೂ ಓದಿ:

ಗಾಯಗೊಂಡ 15 ಮಂದಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಹೀಗಾಗಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯೂ ಇರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !