April 16, 2026
Thursday, April 16, 2026
spot_img

ಮಹಿಳಾ ನೌಕರರಿಗೆ ತಿಂಗಳಿಗೊಂದು ಋತುಚಕ್ರ ರಜೆ ಕಡ್ಡಾಯವಾಗಿ ಕೊಡಬೇಕು: ಹೈಕೋರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಹಿಳೆಯರ ಆರೋಗ್ಯ ಹಾಗೂ ಘನತೆಯನ್ನು ಎತ್ತಿಹಿಡಿದಿರುವ ಹೈಕೋರ್ಟ್‌ ಋತುಚಕ್ರ ರಜೆಯನ್ನು ಕಡ್ಡಾಯಗೊಳಿಸಿ ಐತಿಹಾಸಿಕ ತೀರ್ಪು ನೀಡಿದೆ.

18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ‘ಋತುಸ್ರಾವ ರಜೆ’ ನೀತಿಯನ್ನು ರಾಜ್ಯ ಸರ್ಕಾರವು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಕೋರ್ಟ್ ನಿರ್ದೇಶಿಸಿದೆ. ಈ ಹಿಂದೆಯೇ ಋತುಚಕ್ರದ ರಜೆಗೆ ಅನುಮೋದನೆ ಸಿಕ್ಕಿತ್ತು. ಆದರೆ ಹಲವು ಕಂಪನಿಗಳು ಇದನ್ನು ವಿರೋಧಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದವು.

ನೋಂದಾಯಿತ ಸಂಸ್ಥೆಗಳಲ್ಲಿ ಕೆಲಸ ಮಾಡುವ 18 ರಿಂದ 52 ವರ್ಷದೊಳಗಿನ ಎಲ್ಲಾ ಮಹಿಳಾ ನೌಕರರಿಗೆ ಈ ರಜೆ ಅನ್ವಯವಾಗುತ್ತದೆ. ಶಾಶ್ವತ, ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೂ ಈ ವಿಸ್ತರಣೆ ಮಾಡಬೇಕು ಎಂದು ಹೇಳಿದೆ.ಕೇವಲ ಸಾಫ್ಟ್‌ವೇರ್ ಅಥವಾ ದೊಡ್ಡ ಕಂಪನಿಗಳಲ್ಲದೆ, ಹೋಟೆಲ್ ಕೆಲಸಗಾರರು, ದಿನಗೂಲಿ ನೌಕರರು ಸೇರಿದಂತೆ ಅಸಂಘಟಿತ ವಲಯದ ಮಹಿಳೆಯರಿಗೂ ಈ ಸೌಲಭ್ಯ ತಲುಪುವಂತೆ ಮಾರ್ಗಸೂಚಿಗಳನ್ನು ಹೊರಡಿಸಲು ಸರ್ಕಾರಕ್ಕೆ ಸೂಚಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !