August 7, 2026
Friday, August 7, 2026
spot_img

ಗುಡುಗು-ಮಿಂಚಿನ ಅಬ್ಬರಕ್ಕೆ ನಡುಗಲಿದೆಯೇ ರಾಜ್ಯ? ಮುಂದಿನ 3 ಗಂಟೆ ‘ಹೈ ಅಲರ್ಟ್’ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ವಿವಿಧೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಮುಂದಿನ ಮೂರು ಗಂಟೆಗಳ ಅವಧಿಗೆ ರಾಜ್ಯದ 12 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ಅಲರ್ಟ್ ಘೋಷಿಸಲಾದ ಜಿಲ್ಲೆಗಳು ದಕ್ಷಿಣ ಕನ್ನಡ, ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ತುಮಕೂರು ಹಾಗೂ ಶಿವಮೊಗ್ಗ.

ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಮತ್ತು ಬಿರುಗಾಳಿಯ ಸಂದರ್ಭದಲ್ಲಿ ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಹತ್ತಿರ ನಿಲ್ಲದಂತೆ ಸೂಚಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !