April 17, 2026
Friday, April 17, 2026
spot_img

ಬ್ಲಾಕ್‌ಮಾರ್ಕೆಟ್‌ನಲ್ಲಿ ದುಬಾರಿ ಮೊತ್ತಕ್ಕೆ ಐಪಿಎಲ್‌ ಟಿಕೆಟ್‌ ಸೇಲ್‌ ಮಾಡಿ ಸಿಕ್ಕಿಬಿದ್ದ ಸಿಬ್ಬಂದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾಳಸಂತೆಯಲ್ಲಿ ದುಬಾರಿ ಮೊತ್ತಕ್ಕೆ ಐಪಿಎಲ್‌ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಕೆಎಸ್‌ಸಿಎ ಸದಸ್ಯ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸಿಸಿಬಿ ನಡೆಸಿದ ಸ್ಟಿಂಗ್‌ ಆಪರೇಷನ್‌ನಲ್ಲಿ ದುಪ್ಪಟ್ಟು ಹಣಕ್ಕೆ ಟಿಕೆಟ್‌ ಮಾರುತ್ತಿದ್ದ ಸಿಬ್ಬಂದಿ ಸಿಕ್ಕಿಬಿದ್ದಿದ್ದಾನೆ. ಬ್ಲಾಕ್‌ನಲ್ಲಿ ಐಪಿಎಲ್ ಟಿಕೆಟ್ ಮಾರಾಟ ಮಾಡುತ್ತಿದ್ದ ಚಿನ್ನಸ್ವಾಮಿ ಸ್ಟೇಡಿಯಂನ ಲಕ್ಷ್ಮಿ ಕ್ಯಾಟರ್ಸ್ ಕ್ಯಾಪ್ಟನ್ ಚಂದ್ರಶೇಖರ್ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಚಂದ್ರಶೇಖರ್‌ ವಿಚಾರಣೆ ವೇಳೆ,ಕೆಎಸ್‌ಸಿಎ ಸದಸ್ಯ ಗಣೇಶ್ ಹರಿಕೇಶ್ ಜೊತೆ ಸೇರಿ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಮಾಡುತ್ತಿರೋದಾಗಿ ಹೇಳಿದ್ದಾನೆ. ಎರಡು ಖಾಸಗಿ ಕಂಪನಿಗಳಿಂದ ಆನ್‌ಲೈನ್‌ನಲ್ಲಿ ಟಿಕೆಟ್ ಪಡೆದು ಚಂದ್ರಶೇಖರ್ ಮೂಲಕ ಹೆಚ್ಚಿನ ಬೆಲೆಗೆ ಗಣೇಶ್‌ ಹರಿಕೇಶ್ ಮಾರಾಟ ಮಾಡಿಸುತ್ತಿದ್ದ‌ ಎನ್ನಲಾಗಿದೆ.

ಮೊದಲ ಮ್ಯಾಚ್‌ನಲ್ಲಿ ಬರೋಬ್ಬರಿ 81 ಟಿಕೆಟ್ ಬ್ಲಾಕ್‌ನಲ್ಲಿ ಮಾರಾಟ ಮಾಡಲಾಗಿದೆ. ಒಂದು ಟಿಕೆಟ್‌ಗೆ 15,000ದಿಂದ 19,000 ರೂ ಪಡೆದಿದ್ದಾರೆ ಎನ್ನಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !