April 18, 2026
Saturday, April 18, 2026
spot_img

ಬಿಸಿಲ ಬೇಗೆಯ ನಡುವೆ ಮಳೆಯ ತಂಪು: ಏ.21ರವರೆಗೆ ರಾಜ್ಯದ ಹಲವೆಡೆ ವರುಣನ ಸಿಂಚನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಸೂರ್ಯನ ತಾಪ ದಿನದಿಂದ ದಿನಕ್ಕೆ ಏರುತ್ತಿದ್ದು, ಜನರು ಬಿಸಿಲ ಬೇಗೆಯಿಂದ ಹೈರಾಣಾಗಿದ್ದಾರೆ. ಇದರ ನಡುವೆ ಭಾರತೀಯ ಹವಾಮಾನ ಇಲಾಖೆ ಒಂದು ಸಮಾಧಾನಕರ ಸುದ್ದಿ ನೀಡಿದ್ದು, ಏಪ್ರಿಲ್ 21ರವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನಲ್ಲಿ ಏಪ್ರಿಲ್ 20ರವರೆಗೆ ಹಾಗೂ ದಕ್ಷಿಣ ಒಳನಾಡಿನಲ್ಲಿ ಏಪ್ರಿಲ್ 21ರವರೆಗೆ ಮಳೆಯ ಸಿಂಚನವಾಗಲಿದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯೂ ಇದೆ.

ಬೆಂಗಳೂರಿನಲ್ಲಿ ತಾಪಮಾನ 37 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸದ್ಯಕ್ಕೆ ಮಳೆ ಮುನ್ಸೂಚನೆ ಇದ್ದರೂ, ಮುಂದಿನ ಮೇ ತಿಂಗಳಲ್ಲಿ ಬಿಸಿಲಿನ ತೀವ್ರತೆ ಇನ್ನೂ ಹೆಚ್ಚಾಗಲಿದೆ ಎಂದು ಇಲಾಖೆ ಎಚ್ಚರಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !