April 19, 2026
Sunday, April 19, 2026
spot_img

ಅಲ್ಪಸಂಖ್ಯಾತರ ಹಿತರಕ್ಷಣೆ ನಮ್ಮ ಹೊಣೆ: ಟಾರ್ಗೆಟ್ ರಾಜಕೀಯಕ್ಕೆ ಡಿಕೆಶಿ ಬ್ರೇಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್ ಪಕ್ಷ ನೀಡಿದಷ್ಟು ಬೆಂಬಲ ಮತ್ತು ಸಹಾಯವನ್ನು ಬೇರೆ ಯಾರೂ ನೀಡಿಲ್ಲ ಹಾಗೂ ಮುಂದೆಯೂ ನೀಡಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸಚಿವ ಜಮೀರ್ ಅಹ್ಮದ್ ಅವರ ರಾಜೀನಾಮೆ ವದಂತಿಗಳ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ಈ ವಿಷಯ ಕೇವಲ ಪತ್ರಿಕೆಗಳಲ್ಲಿ ವರದಿಯಾಗಿದೆಯೇ ಹೊರತು ಸಂಪುಟ ಸಭೆಯಲ್ಲಿ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದರು.

ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರವಾಗಿ ಮಾತನಾಡಿದ ಅವರು, ಅದು ಕೇವಲ ಅಲ್ಪಸಂಖ್ಯಾತರ ಕ್ಷೇತ್ರವಲ್ಲ. ದಶಕಗಳಿಂದ ಶಾಮನೂರು ಶಿವಶಂಕರಪ್ಪ ಅವರು ಅದನ್ನು ಉಳಿಸಿಕೊಂಡು ಬಂದಿದ್ದಾರೆ. ಅಲ್ಪಸಂಖ್ಯಾತ ನಾಯಕರು ಟಿಕೆಟ್ ಕೇಳುವುದು ತಪ್ಪಲ್ಲ, ಆದರೆ ಪಕ್ಷದ ವರದಿಗಳ ಆಧಾರದ ಮೇಲೆ ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ಸದಾ ಮುಸ್ಲಿಂ ನಾಯಕರ ಬೆನ್ನೆಲುಬಾಗಿ ನಿಂತಿದೆ ಎಂದು ಡಿಕೆಶಿ ಸ್ಪಷ್ಟಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !