April 20, 2026
Monday, April 20, 2026
spot_img

ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ SRH ತಂಡದಲ್ಲಿ ಬಿಗ್ ಚೇಂಜ್: ಇಬ್ಬರು ಹೊಸ ಪ್ಲೇಯರ್ಸ್ ಎಂಟ್ರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2026ರ 27ನೇ ಪಂದ್ಯಕ್ಕೂ ಮುನ್ನ ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಮಹತ್ವದ ಬದಲಾವಣೆ ನಡೆದಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಹೋರಾಟಕ್ಕೆ ಸಜ್ಜಾಗಿರುವ ಎಸ್‌ಆರ್‌ಎಚ್, ಗಾಯದ ಸಮಸ್ಯೆಯಿಂದ ಇಬ್ಬರು ಆಟಗಾರರನ್ನು ಕಳೆದುಕೊಂಡು, ಅವರ ಬದಲಿಗೆ ಹೊಸ ವಿದೇಶಿ ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಇಂಗ್ಲೆಂಡ್ ವೇಗಿ ಡೇವಿಡ್ ಪೇನ್ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ದಕ್ಷಿಣ ಆಫ್ರಿಕಾ ವೇಗದ ಬೌಲರ್ ಜೆರಾಲ್ಡ್ ಕೋಟ್ಝಿ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಇನ್ನೊಂದೆಡೆ, ಇಂಗ್ಲೆಂಡ್ ಆಲ್‌ರೌಂಡರ್ ಬ್ರೈಡನ್ ಕಾರ್ಸ್ ಕೂಡ ಗಾಯದ ಕಾರಣದಿಂದ ಹೊರಬಿದ್ದಿದ್ದು, ಅವರ ಬದಲಿಗೆ ಶ್ರೀಲಂಕಾದ ವೇಗಿ ದಿಲ್ಶನ್ ಮಧುಶಂಕ ಎಸ್‌ಆರ್‌ಎಚ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ:

ಇಂದು (ಏಪ್ರಿಲ್ 18) ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೆ ದಿಲ್ಶನ್ ಮಧುಶಂಕ ಲಭ್ಯರಿದ್ದಾರೆ. ಆದರೆ ಜೆರಾಲ್ಡ್ ಕೋಟ್ಝಿ ಮುಂದಿನ ಪಂದ್ಯಗಳ ವೇಳೆಗೆ ತಂಡವನ್ನು ಸೇರಿಕೊಳ್ಳುವ ಸಾಧ್ಯತೆ ಇದೆ.

ಈ ಬದಲಾವಣೆಗಳೊಂದಿಗೆ ಮಧ್ಯ ಹಂತದಲ್ಲಿ ತಂಡದ ಬೌಲಿಂಗ್ ವಿಭಾಗವನ್ನು ಬಲಪಡಿಸಲು ಎಸ್‌ಆರ್‌ಎಚ್ ಮುಂದಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !