April 20, 2026
Monday, April 20, 2026
spot_img

ಈಡನ್‌ನಲ್ಲಿ ಮೊದಲ ಗೆಲುವಿಗಾಗಿ KKR ಹೋರಾಟ: ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಐಪಿಎಲ್ 2026ರ 28ನೇ ರೋಚಕ ಹಣಾಹಣಿ ಆರಂಭವಾಗಿದೆ. ತವರು ಮೈದಾನದಲ್ಲಿ ಈ ಸೀಸನ್‌ನ ಮೊದಲ ಗೆಲುವಿನ ನಿರೀಕ್ಷೆಯಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ರಾಜಸ್ಥಾನ್ ರಾಯಲ್ಸ್ ಸವಾಲು ಎದುರಾಗಿದೆ.

ಕಳೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋತಿದ್ದ ರಾಜಸ್ಥಾನ್ ರಾಯಲ್ಸ್, ಮತ್ತೆ ಗೆಲುವಿನ ಲಯಕ್ಕೆ ಮರಳಲು ಹವಣಿಸುತ್ತಿದೆ.

ಟಾಸ್ ಗೆದ್ದಿರುವ ರಾಜಸ್ಥಾನ್ ತಂಡದ ನಾಯಕ ರಿಯಾನ್ ಪರಾಗ್ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಇದರಿಂದಾಗಿ ಶ್ರೇಯಸ್ ಅಯ್ಯರ್ ಪಡೆ ಮೊದಲು ಬೌಲಿಂಗ್ ದಾಳಿ ನಡೆಸಲಿದ್ದು, ಈಡನ್ ಅಂಗಳದಲ್ಲಿ ರನ್ ಮಳೆ ಹರಿಯುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !