ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರಮಂದಿರಕ್ಕೆ ಬರುವುದಕ್ಕೂ ಮುನ್ನವೇ ಭರ್ಜರಿ ಬಿಸಿನೆಸ್ ಮೂಲಕ ‘ಜೈಲರ್ 2’ ಸಿನಿಮಾ ಸದ್ದು ಮಾಡುತ್ತಿದೆ. ಸೂಪರ್‌ಸ್ಟಾರ್ ರಜಿನಿಕಾಂತ್ ಅಭಿನಯದ ಈ ಬಹುನಿರೀಕ್ಷಿತ ಚಿತ್ರ, ಡಿಜಿಟಲ್ ಹಕ್ಕುಗಳ ಮಾರಾಟದಲ್ಲೇ ದೊಡ್ಡ ದಾಖಲೆ ಬರೆಯುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ.
ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ಮತ್ತು ರಜನಿಕಾಂತ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಈ ಸೀಕ್ವೆಲ್, ದೊಡ್ಡ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿದೆ. ವರದಿಗಳ ಪ್ರಕಾರ, ಅಮೆಜಾನ್ ಪ್ರೈಮ್ ವಿಡಿಯೋ ಸಂಸ್ಥೆ ‘ಜೈಲರ್ 2’ ಚಿತ್ರದ ಒಟಿಟಿ ಹಕ್ಕುಗಳನ್ನು ಸುಮಾರು 160 ಕೋಟಿ ರೂಪಾಯಿಗೆ ಪಡೆದುಕೊಂಡಿದೆ ಎನ್ನಲಾಗುತ್ತಿದೆ. ಇದು ತಮಿಳು ಸಿನಿ ಇತಿಹಾಸದಲ್ಲೇ ಅತಿ ದೊಡ್ಡ ಡಿಜಿಟಲ್ ಡೀಲ್ ಎನ್ನುವ ಮಾತು ಕೇಳಿಬರುತ್ತಿದೆ.
ಇದನ್ನೂ ಓದಿ:
ಇದಕ್ಕೂ ಮೊದಲು ಕಮಲ್ ಹಾಸನ್ ಹಾಗೂ ಮಣಿ ರತ್ನಂ ಅವರ ‘ಥಗ್ ಲೈಫ್’ ಚಿತ್ರ ಸುಮಾರು 150 ಕೋಟಿ ರೂಪಾಯಿಗೆ ಒಟಿಟಿ ಹಕ್ಕುಗಳನ್ನು ಮಾರಾಟ ಮಾಡಿ ದಾಖಲೆ ನಿರ್ಮಿಸಿತ್ತು. ಇದೀಗ ‘ಜೈಲರ್ 2’ ಆ ದಾಖಲೆಯನ್ನು ಮೀರಿ ಹೋಗಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಇನ್ನೂ ಹೊರಬಂದಿಲ್ಲ.
ಒಟ್ಟಿನಲ್ಲಿ, ‘ಜೈಲರ್ 2’ ಸಿನಿಮಾ ಬಿಡುಗಡೆಗೂ ಮುನ್ನವೇ ದೊಡ್ಡ ಮಟ್ಟದಲ್ಲಿ ಹೈಪ್ ಕ್ರಿಯೇಟ್ ಮಾಡಿದ್ದು, ಬಾಕ್ಸ್ ಆಫೀಸ್‌ನಲ್ಲಿ ಯಾವ ಮಟ್ಟದ ಸಾಧನೆ ಮಾಡಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.



