July 4, 2026
Saturday, July 4, 2026
spot_img

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 18 ಮಂದಿಯ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ವಿರುಧುನಗರ ಜಿಲ್ಲೆಯ ಕಟ್ಟನಾರಪಟ್ಟಿ ಪ್ರದೇಶದಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಭಾನುವಾರ ಸಂಭವಿಸಿದ ಭಾರೀ ಸ್ಫೋಟವು ಭೀಕರ ದುರಂತಕ್ಕೆ ಕಾರಣವಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಇನ್ನೂ ಕೆಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.

ಇದನ್ನೂ ಓದಿ:

ಘಟಕದ ಒಂದು ವಿಭಾಗದಲ್ಲಿ ಆರಂಭವಾದ ಬೆಂಕಿ ಕ್ಷಣಾರ್ಧದಲ್ಲೇ ಇತರ ಘಟಕಗಳಿಗೆ ವ್ಯಾಪಿಸಿ, ಸರಣಿ ಸ್ಫೋಟಗಳಿಗೆ ಕಾರಣವಾಗಿದೆ. ಸ್ಫೋಟದ ತೀವ್ರತೆಯಿಂದ ನಾಲ್ಕು ಘಟಕಗಳು ಸಂಪೂರ್ಣವಾಗಿ ಹಾನಿಗೀಡಾಗಿದ್ದು, ಸಮೀಪದ ಕಟ್ಟಡಗಳಿಗೂ ಹಾನಿಯಾಗಿದೆ. ಈ ಘಟನೆ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ.

ಅಗ್ನಿಶಾಮಕ ದಳ, ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಅವಶೇಷ ತೆರವು ಕಾರ್ಯದಲ್ಲಿ ನಿರತರಾಗಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳವನ್ನು ಭದ್ರತಾ ವಲಯವಾಗಿ ಘೋಷಿಸಿ ಕಠಿಣ ಕ್ರಮಗಳನ್ನು ಜಾರಿಗೆ ತರಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !