September 16, 2026
Wednesday, September 16, 2026
spot_img

ಹೈವೋಲ್ಟೇಜ್ ಪಂದ್ಯಕ್ಕೆ ಪಂಜಾಬ್-ಲಕ್ನೋ ಸಜ್ಜು: ಟಾಸ್ ಗೆದ್ದ ಪಂತ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ನಲ್ಲಿ ಇಂದು ಹೈವೋಲ್ಟೇಜ್ ಪಂದ್ಯಕ್ಕೆ ಪಂಜಾಬ್-ಲಕ್ನೋ ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ನಾಯಕ ರಿಷಭ್ ಪಂತ್ ಮೊದಲು ಬೌಲಿಂಗ್ ಆಯ್ಕೆಮಾಡಿಕೊಂಡಿದ್ದಾರೆ.

ಪಂಜಾಬ್ ಕಿಂಗ್ಸ್ ಇಲ್ಲಿಯವರೆಗೆ ಆಡಿದ ಎಲ್ಲಾ ಪಂದ್ಯವನ್ನು ಗೆದ್ದು ಪಾಯಿಂಟ್ ಟೇಬಲ್ ನಲ್ಲಿ ಮೊದಲ ಸ್ಥಾನದಲ್ಲಿದ್ದು, ಲಕ್ನೋ ಸೂಪರ್ ಜೈಂಟ್ಸ್ ತಂಡ ಆಡಿದ ಐದು ಪಂದ್ಯಗಳಲ್ಲಿ ಕೇವಲ ಎರಡರಲ್ಲಿ ಮಾತ್ರ ಗೆಲುವು ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿ ಮತ್ತೆ ಗೆಲುವಿನ ಹಳಿ ಏರುವುದು ಅನಿವಾರ್ಯವಾಗಿದೆ.

ಪಂಜಾಬ್ ಕಿಂಗ್ಸ್ : ಪ್ರಭಾಸಿಮ್ರಾನ್ ಸಿಂಗ್ (ವಿಕೀ), ಪ್ರಿಯಾಂಶ್ ಆರ್ಯ, ಕೂಪರ್ ಕೊನೊಲಿ, ಶ್ರೇಯಸ್ ಅಯ್ಯರ್ (ನಾಯಕ), ಶಶಾಂಕ್ ಸಿಂಗ್, ನೆಹಾಲ್ ವಧೇರಾ, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಜಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.

ಲಕ್ನೋ ಸೂಪರ್ ಜೈಂಟ್ಸ್: ಏಡೆನ್ ಮಾರ್ಕ್ರಾಮ್, ಮಿಚೆಲ್ ಮಾರ್ಷ್, ರಿಷಭ್ ಪಂತ್ (ನಾಯಕ ಮತ್ತು ವಿಕೀ ), ನಿಕೋಲಸ್ ಪೂರನ್, ಆಯುಷ್ ಬಡೋನಿ, ಮುಕುಲ್ ಚೌಧರಿ, ಮೊಹಮ್ಮದ್ ಶಮಿ, ಅವೇಶ್ ಖಾನ್, ಪ್ರಿನ್ಸ್ ಯಾದವ್, ಮಣಿಮಾರನ್ ಸಿದ್ಧಾರ್ಥ್, ಮೊಹ್ಸಿನ್ ಖಾನ್.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !