April 19, 2026
Sunday, April 19, 2026
spot_img

ಶ್ರೀನಗರ ಏರ್ ಪೋರ್ಟ್ ನಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಪತ್ತೆ: ಇಬ್ಬರು ಅಮೆರಿಕ ಪ್ರಜೆಗಳು ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶ್ರೀನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಗಳು ತಪಾಸಣೆ ನಡೆಸುವ ವೇಳೆ ನಿಷೇಧಿತ ಸ್ಯಾಟಲೈಟ್ ಫೋನ್ ಗಳು ಪತ್ತೆಯಾಗಿದ್ದು, ಈ ಸಂಬಂಧ ಇಬ್ಬರು ಅಮೆರಿಕ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ.

ಭಾರತದಲ್ಲಿ ಸರಕಾರದ ಪೂರ್ವಾನುಮತಿ ಇಲ್ಲದೇ ಸ್ಯಾಟಲೈಟ್ ಫೋನ್‌ಗಳ ಬಳಕೆ ಸಂಪೂರ್ಣ ನಿಷೇಧವಿದ್ದು, ಇದರ ನಡುವೆ ಏರ್ ಪೋರ್ಟ್ ನಲ್ಲಿ ಅಮೆರಿಕ ಪ್ರಜೆಗಳ ಬ್ಯಾಗ್ ನಲ್ಲಿ ಪತ್ತೆಯಾಗಿದ್ದು, ಇಬ್ಬರು ವ್ಯಕ್ತಿಗಳನ್ನು ಭದ್ರತಾ ಸಿಬ್ಬಂದಿಗಳು ವಶಕ್ಕೆ ಪಡೆದಿದ್ದು, ಹೆಚ್ಚಿನ ಮಾಹಿತಿಗಾಗಿ ವಿಚಾರಣೆ ನಡೆಸುತ್ತಿದ್ದಾರೆ.

ಈಗಾಗಲೇ ಉಗ್ರ ದಾಳಿಯ ಆತಂಕ ಇರುವ ಹಿನ್ನೆಲೆ ಜಮ್ಮು ಮತ್ತು ಕಾಶ್ಮೀರ ಸುತ್ತ ಭದ್ರತೆ ಹೆಚ್ಚಿಸಲಾಗಿದ್ದು, ಇದರ ನಡುವೆ ಸ್ಯಾಟಲೈಟ್ ಫೋನ್ ಗಳ ಪತ್ತೆ ಭೀತಿ ಮೂಡಿಸಿದೆ. ಹೀಗಾಗಿ ಪೊಲೀಸರು ಇದರ ಮೂಲದ ಕುರಿತು ತನಿಖೆ ನಡೆಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !