April 20, 2026
Monday, April 20, 2026
spot_img

ಕೊನೆಗೂ ಬಿಸಿಲಿಗೆ ಬಿತ್ತು ಬ್ರೇಕ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆಗಮನದ ಮುನ್ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಬೇಸಿಗೆಯ ತಾಪಮಾನ ಗರಿಷ್ಠ ಮಟ್ಟ ತಲುಪಿರುವ ನಡುವೆಯೇ, ಜನರಿಗೆ ಕೊಂಚ ನಿರಾಳತೆಯ ಸುದ್ದಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ 40 ಡಿಗ್ರಿಗೂ ಮೀರಿದ ಉಷ್ಣಾಂಶ ದಾಖಲಾಗುತ್ತಿದ್ದ ಹಿನ್ನೆಲೆ ಜನಜೀವನ ತತ್ತರಿಸಿತ್ತು. ಇದೀಗ ಮಳೆಯ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿರುವುದರಿಂದ ಬಿಸಿಲಿನ ತಾಪಮಾನಕ್ಕೆ ತಾತ್ಕಾಲಿಕ ವಿರಾಮ ಸಿಗುವ ನಿರೀಕ್ಷೆ ಮೂಡಿದೆ.

ಮುಂದಿನ ಐದು ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು-ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ:

ಇದೇ ವೇಳೆ ಕರಾವಳಿ ಭಾಗಗಳಲ್ಲಿ ಹೀಟ್ ವೇವ್ ಎಚ್ಚರಿಕೆಯನ್ನು ಸಹ ನೀಡಲಾಗಿದೆ. ಮಧ್ಯಾಹ್ನ ವೇಳೆಯಲ್ಲಿ ತಾಪಮಾನ ಹೆಚ್ಚಳವಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ. ಏಪ್ರಿಲ್ 21ರಂದು ಮತ್ತಷ್ಟು ಜಿಲ್ಲೆಗಳಿಗೆ ಅಲರ್ಟ್ ವಿಸ್ತರಿಸಲಾಗಿದ್ದು, 22 ಮತ್ತು 23ರಂದು ಸಹ ಮಳೆಯ ಪ್ರಮಾಣ ಮುಂದುವರಿಯುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !