August 15, 2026
Saturday, August 15, 2026
spot_img

WEATHER | ಉತ್ತರ ಒಳನಾಡು-ದಕ್ಷಿಣ ಒಳನಾಡಿನಲ್ಲಿ ಇಂದು ವರ್ಷಧಾರೆ, ಆಲಿಕಲ್ಲು ಕೂಡ ಬೀಳಬಹುದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉತ್ತರ ಒಳನಾಡು-ದಕ್ಷಿಣ ಒಳನಾಡಿನಲ್ಲಿ ಇಂದು ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಆಲಿಕಲ್ಲು ಸಹಿತ ಮಳೆಯಾಗುವ ಸಂಭವವಿದೆ.

ಇನ್ನೂ ಮಳೆಯ ನಡುವೆಯೂ ಮುಂದಿನ 5 ದಿನಗಳ ಕಾಲ ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿ ಗಾಳಿ ಹೆಚ್ಚಾಗಲಿದೆ.

ಇನ್ನುಳಿದ ಜಿಲ್ಲೆಗಳಲ್ಲಿ ಯಾವುದೇ ರೀತಿಯ ವ್ಯತ್ಯಾಸವಿಲ್ಲದಂತೆ ಬಿಸಿಲು ಕಾಡಲಿದೆ. ಜನರು ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಬೇಕಿದೆ. ಹೆಚ್ಚು ನೀರು ಹಾಗೂ ಲಿಕ್ವಿಡ್‌ ಪದಾರ್ಥಗಳು, ಮಧ್ಯಾಹ್ನದ ಬಿಸಿಲಿನಲ್ಲಿ ಓಡಾಟ ನಿಲ್ಲಿಸಿ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !