April 20, 2026
Monday, April 20, 2026
spot_img

ತಿರುವಿನಲ್ಲಿ ಕಾದು ಕುಳಿತಿದ್ದ ಯಮ: ಕಂದಕಕ್ಕೆ ಉರುಳಿದ ಬಸ್, ಹದಿನೈದು ಮಂದಿ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಘೋರ ರಸ್ತೆ ಅಪಘಾತ ಸಂಭವಿಸಿದ್ದು, ಕಂದಕಕ್ಕೆ ಬಸ್ ಉರುಳಿಬಿದ್ದ ಪರಿಣಾಮ ಹದಿನೈದು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಇಂದು ಬೆಳಿಗ್ಗೆ ಸುಮಾರು ಹತ್ತು ಗಂಟೆಯ ಸುಮಾರಿಗೆ ರಾಮನಗರದಿಂದ ಉಧಂಪುರಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್, ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿದೆ. ಬಸ್ಸಿನಲ್ಲಿದ್ದ ಹದಿನೈದು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ವಿಷಯ ತಿಳಿಯುತ್ತಿದ್ದಂತೆಯೇ ಸೇನಾ ಪಡೆಗಳು, ಸ್ಥಳೀಯ ಪೊಲೀಸರು ಹಾಗೂ ಗ್ರಾಮಸ್ಥರು ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಈ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಏರಿಕೆಯಾಗುವ ಭೀತಿ ಎದುರಾಗಿದೆ.

ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಘಟನೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದು, ಗಾಯಾಳುಗಳಿಗೆ ಅತ್ಯಾಧುನಿಕ ಚಿಕಿತ್ಸೆ ನೀಡಲು ಸೂಚಿಸಿದ್ದಾರೆ. ಅಗತ್ಯಬಿದ್ದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಸ್ಥಳಾಂತರಿಸಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !