ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಜಸ್ಥಾನದ ಬಲೋತ್ರಾ ಜಿಲ್ಲೆಯಲ್ಲಿ ನಾಳೆ ಉದ್ಘಾಟನೆಗೆ ಸಜ್ಜಾಗಿದ್ದ ಬಹುನಿರೀಕ್ಷಿತ ಭಾರತೀಯ ಸಂಸ್ಕರಣಾಗಾರದಲ್ಲಿ ಏಕಾಏಕಿ ಅಗ್ನಿ ಅವಘಡ ಸಂಭವಿಸಿದ್ದು, ಕೂಡಲೇ ಅಗ್ನಿಶಾಮಕ ದಳ ವಾಹನ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.
ಮೋದಿ ಸರಕಾರದ ಪ್ರಮುಖ ಯೋಜನೆಯ ಭಾಗವಾಗಿ ಸುಮಾರು 79,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಭಾರತದ ಮೊದಲ ಗ್ರೀನ್‌ಫೀಲ್ಡ್ ಇಂಟಿಗ್ರೇಟೆಡ್ ರಿಫೈನರಿ-ಕಮ್-ಪೆಟ್ರೋಕೆಮಿಕಲ್ ಕಾಂಪ್ಲೆಕ್ಸ್ ನ ಸಂಸ್ಕರಣಾಗಾರವು ಇದಾಗಿದ್ದು, ನಾಳೆ ಖುದ್ದು ಪ್ರಧಾನಿ ಮೋದಿ ಅವರು ಉದ್ಘಾಟನೆ ಮಾಡಲಿದ್ದಾರೆ.
ಇದೀಗ ಎಲ್ಲಾ ರೀತಿಯ ಸಿದ್ದತೆಯ ನಡುವೆ ದಿಢೀರ್ ಅಗ್ನಿ ಅವಘಡ ಸಂಭವಿಸಿದ್ದು, ಕೊಡಲೇ ಜಿಲ್ಲಾಡಳಿತ, ಪೊಲೀಸ್ ಇಲಾಖೆ , ಅಗ್ನಿಶಾಮಕ ವಾಹನಗಳು ಸನ್ನದ್ದು ಆಗಿದ್ದು, ಸ್ಥಳಕ್ಕೆ ತಲುಪಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ಸದ್ಯ ಪ್ರದೇಶ ಸುತ್ತ ಕಟ್ಟೆಚ್ಚರ ವಹಿಸಲಾಗಿದ್ದು, ನೌಕರರನ್ನು ಸುರಕ್ಷಿತವಾಗಿ ಹೊರಗೆ ತರಲಾಯಿತು. ಯಾವುದೇ ಸಾವುನೋವುಗಳ ವರದಿಯಾಗಿಲ್ಲ.



