October 22, 2026
Thursday, October 22, 2026
spot_img

ಟ್ರಂಪ್ ಹೇಳಿದಂತೆ ಪ್ರಧಾನಿ ಕೇಳ್ತಾರೆ: ಮೋದಿ ವಿರುದ್ಧ ರಾಹುಲ್ ಗಾಂಧಿ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ಆರೋಪಗಳನ್ನು ಮಾಡಿದ್ದು, ರಾಜಕೀಯ ವಾತಾವರಣ ಮತ್ತೆ ಕಾವೇರಿದೆ. ಮೋದಿ ಅವರ ವಿದೇಶಾಂಗ ನಡೆ ಅಮೆರಿಕದ ಪ್ರಭಾವದಲ್ಲಿದೆ ಎಂಬ ಆರೋಪವನ್ನು ಅವರು ಪುನರುಚ್ಚರಿಸಿದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದಂತೆ ಪ್ರಧಾನಿ ನಡೆದುಕೊಳ್ಳುತ್ತಾರೆ ಎಂದು ಆರೋಪಿಸಿದರು. ಇರಾನ್‌ನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವ ಮೊದಲು, ಹಠಾತ್ ಇಸ್ರೇಲ್ ಭೇಟಿ ನಡೆಸಿದ್ದು ಕೂಡ ಅದೇ ಪ್ರಭಾವದ ಫಲ ಎಂದು ಹೇಳಿದರು.

ಇದನ್ನೂ ಓದಿ:

ಮೋದಿ ಅವರ ನಿರ್ಧಾರಗಳಲ್ಲಿ ಸ್ವಾಯತ್ತತೆ ಕಾಣುತ್ತಿಲ್ಲ ಎಂದು ಟೀಕಿಸಿದ ರಾಹುಲ್, ಕೆಲ ಅಂತಾರಾಷ್ಟ್ರೀಯ ವಿಚಾರಗಳಲ್ಲಿ ಭಾರತ ತನ್ನದೇ ನಿಲುವು ಸ್ಪಷ್ಟಪಡಿಸಬೇಕಾಗಿತ್ತು ಎಂದು ಅಭಿಪ್ರಾಯಪಟ್ಟರು. ಜೊತೆಗೆ, ಕೆಲವು ಸೂಕ್ಷ್ಮ ವಿಷಯಗಳನ್ನು ಉಲ್ಲೇಖಿಸಿ ಪ್ರಧಾನಿ ನಡೆಗೆ ಪ್ರಶ್ನೆ ಎತ್ತಿದರು.

ಈ ಹೇಳಿಕೆಗಳಿಗೆ ಬಿಜೆಪಿ ತೀವ್ರ ಪ್ರತಿಕ್ರಿಯೆ ನೀಡುವ ಸಾಧ್ಯತೆ ಇದ್ದು, ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಳ್ಳುವ ಸೂಚನೆಗಳು ಕಂಡುಬರುತ್ತಿವೆ.

Must Read