April 20, 2026
Monday, April 20, 2026
spot_img

GT vs MI | ಅಹಮದಾಬಾದ್‌ನಲ್ಲಿ ಹೈವೋಲ್ಟೇಜ್ ಕಾದಾಟ: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

IPL 2026ರ 30ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಪಂದ್ಯಕ್ಕೆ ಭಾರೀ ನಿರೀಕ್ಷೆ ವ್ಯಕ್ತವಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಗುಜರಾತ್ ತಂಡದ ನಾಯಕ ಶುಭ್​ಮನ್ ಗಿಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ತೀರ್ಮಾನಿಸಿದ್ದಾರೆ.

ಇದರಿಂದ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಮೊದಲು ಬ್ಯಾಟಿಂಗ್ ಆರಂಭಿಸಿದೆ. ಎರಡೂ ತಂಡಗಳ ನಡುವೆ ಈ ಪಂದ್ಯ ಮಹತ್ವದ್ದಾಗಿದ್ದು, ಪಾಯಿಂಟ್ ಪಟ್ಟಿಯಲ್ಲಿ ಮೇಲಕ್ಕೆ ಏರಲು ಎರಡೂ ತಂಡಗಳು ಗೆಲುವಿನತ್ತ ಕಣ್ಣಿಟ್ಟಿವೆ.

ಇದನ್ನೂ ಓದಿ:

ಗುಜರಾತ್ ತಂಡ ಈ ಪಂದ್ಯಕ್ಕೆ ಯಾವುದೇ ಬದಲಾವಣೆ ಇಲ್ಲದೆ ಅದೇ ಪ್ಲೇಯಿಂಗ್-11 ಕಣಕ್ಕಿಳಿದಿದೆ. ಇನ್ನೊಂದೆಡೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲಾಗಿದ್ದು, ಡ್ಯಾನಿಶ್ ಮಾಲೆವಾರ್ ಮತ್ತು ಕ್ರಿಶ್ ಭಗತ್ ಮೊದಲ ಬಾರಿಗೆ ಐಪಿಎಲ್ ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ.

ಈ ಹೊಸ ಆಟಗಾರರ ಪ್ರದರ್ಶನ ಹೇಗಿರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದ್ದು, ಪಂದ್ಯ ರೋಚಕ ಘಟ್ಟಕ್ಕೆ ತಲುಪುವ ನಿರೀಕ್ಷೆ ಹೆಚ್ಚಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !