April 21, 2026
Tuesday, April 21, 2026
spot_img

ಆ ಹುಡುಗನ ಬಗ್ಗೆ ಯಾರೊಬ್ಬರೂ ಮಾತಾಡ್ತಿಲ್ಲ: ರವಿಚಂದ್ರನ್ ಅಶ್ವಿನ್ ಹೇಳಿದ್ದು ಯಾರ ಬಗ್ಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2026ರಲ್ಲಿ ಯುವ ಆಟಗಾರರ ಭರ್ಜರಿ ಪ್ರದರ್ಶನ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಆದರೆ ಕೆಲ ಪ್ರತಿಭೆಗಳು ಗಮನಾರ್ಹ ಸಾಧನೆ ಮಾಡಿದರೂ ಕೂಡ ತಕ್ಕ ಮಟ್ಟದ ಚರ್ಚೆಗೆ ಒಳಗಾಗುತ್ತಿಲ್ಲ. ಇದೇ ವಿಷಯವನ್ನು ಮುಂದಿಟ್ಟುಕೊಂಡು ಭಾರತದ ಮಾಜಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ತಮ್ಮ ಅಭಿಪ್ರಾಯವನ್ನು ಹೊರಹಾಕಿದ್ದಾರೆ.

ಪಂಜಾಬ್ ಕಿಂಗ್ಸ್ ಪರ ಆಡುತ್ತಿರುವ ಯುವ ಓಪನರ್ ಪ್ರಿಯಾಂಶ್ ಆರ್ಯ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೇವಲ 37 ಎಸೆತಗಳಲ್ಲಿ 93 ರನ್ ಸಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಈ ಸೀಸನ್‌ನಲ್ಲಿ ಐದು ಪಂದ್ಯಗಳಲ್ಲಿ ಈಗಾಗಲೇ 211 ರನ್ ಗಳಿಸಿರುವ ಅವರು ಉತ್ತಮ ಫಾರ್ಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಆದರೂ ಸಹ, ವೈಭವ್ ಸೂರ್ಯವಂಶಿ ಮತ್ತು ಆಯುಷ್ ಮ್ಹಾತ್ರೆ ಅವರ ಪ್ರದರ್ಶನಗಳಷ್ಟೇ ಚರ್ಚೆ ಪ್ರಿಯಾಂಶ್‌ಗೆ ಸಿಗುತ್ತಿಲ್ಲ ಎಂದು ಅಶ್ವಿನ್ ಹೇಳಿದ್ದಾರೆ.

ಇದನ್ನೂ ಓದಿ:

ಪ್ರಿಯಾಂಶ್ ಆಟದ ಶೈಲಿ ಆಕ್ರಮಣಕಾರಿ ಆಗಿದ್ದು, ದೊಡ್ಡ ಇನ್ನಿಂಗ್ಸ್ ಕಟ್ಟುವ ಸಾಮರ್ಥ್ಯ ಹೊಂದಿದ್ದಾರೆ. ವಿಭಿನ್ನ ಶಾಟ್‌ಗಳ ಬಳಕೆ ಅವರ ಆಟದ ಬಲವಾಗಿದೆ. ಭವಿಷ್ಯದಲ್ಲಿ ಭಾರತೀಯ ಕ್ರಿಕೆಟ್‌ಗೆ ಪ್ರಮುಖ ಆಟಗಾರರಾಗುವ ಸಾಧ್ಯತೆ ಇದೆ ಎಂದು ಅಶ್ವಿನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ, ತಂಡದ ಪ್ರದರ್ಶನವೂ ಉತ್ತಮವಾಗಿದೆ. ಪಂಜಾಬ್ ಕಿಂಗ್ಸ್ ಈಗಾಗಲೇ ಆಡಿದ ಆರು ಪಂದ್ಯಗಳಲ್ಲಿ ಐದು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಒಂದು ಪಂದ್ಯ ಮಳೆಯಿಂದ ರದ್ದಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !