June 19, 2026
Friday, June 19, 2026
spot_img

ತಮಿಳುನಾಡಿನಲ್ಲಿ ಬಿರುಸಿನ ಮತಬೇಟೆಗೆ ತೆರೆ: ನಾಳೆ ಮನೆ ಮನೆ ಪ್ರಚಾರಕ್ಕೆ ಅವಕಾಶ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ವಿಧಾನಸಭೆ ಚುನಾವಣೆಗೆ ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬಿದ್ದಿದೆ. ಇನ್ನೊಂದು ದಿನದ ಮನೆ ಮನೆ ಮತಬೇಟೆಯ ಬಳಿಕ ಮತದಾನ ನಡೆದು ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್‌ ರೂಂನಲ್ಲಿ ಭದ್ರವಾಗಲಿದೆ.

ಈ ಬಾರಿಯ ಚುನಾವಣಾ ಪ್ರಚಾರ ಬಹಳ ಬಿರುಸಿನಿಂದ ಕೂಡಿತ್ತು. ಒಂದೆಡೆ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿ ಪಕ್ಷಗಳು ಮತ್ತೆ ಅಧಿಕಾರಕ್ಕೇರಲು ಭರ್ಜರಿ ಮತಯಾಚನೆ ನಡೆಸಿದರೆ, ಮತ್ತೊಂದೆಡೆ ಎಐಎಡಿಎಂಕೆ ಮತ್ತು ಬಿಜೆಪಿ ನೇತೃತ್ವದ ಎನ್​ಡಿಎಯು ತಮಿಳುನಾಡು ಗದ್ದುಗೆಗೆ ಏರಲು ಶತಪ್ರಯತ್ನ ನಡೆಸುತ್ತಿದೆ. ಇದರ ಮಧ್ಯೆ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸುವ ಮೂಲಕ ಠಕ್ಕರ್ ನೀಡಲು ಮುಂದಾಗಿದೆ.

ಇಂದು ಪ್ರಚಾರದ ಕೊನೆಯ ದಿನವಾಗಿದ್ದು, ಎಲ್ಲಾ ಪಕ್ಷಗಳ ಪ್ರಮುಖ ನಾಯಕರು ಕ್ಷೇತ್ರಾದ್ಯಂತ ಓಡಾಡಿ ಮತಯಾಚನೆ ನಡೆಸಿದ್ದಾರೆ.

ತಮಿಳುನಾಡಿನಲ್ಲಿ ಈ ಬಾರಿ 234 ವಿಧಾನಸಭಾ ಕ್ಷೇತ್ರಗಳಲ್ಲಿ 4,000 ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಏ. 23 ಒಂದೇ ಹಂತದಲ್ಲಿ ಮತದಾನ ನಡೆದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !