April 22, 2026
Wednesday, April 22, 2026
spot_img

ಇಡಿ ತನಿಖೆಯಲ್ಲಿ ಹಸ್ತಕ್ಷೇಪ: ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಸುಪ್ರೀಂ ಕೋರ್ಟ್ ಛೀಮಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದ ಚುನಾವಣಾ ಅಖಾಡದಲ್ಲಿ ಬಿರುಸಿನ ಮತಬೇಟೆ ನಡೆಸುತ್ತಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಸುಪ್ರೀಂ ಕೋರ್ಟ್ ಇಂದು ಚಾಟಿ ಬೀಸಿದೆ .

ಐ-ಪ್ಯಾಕ್ ಸಂಸ್ಥೆ ಮೇಲಿನ ಇಡಿ ದಾಳಿಗೆ ತಡೆಯೊಡ್ಡಿದ್ದ ಮಮತಾ ಬ್ಯಾನರ್ಜಿ ವಿರುದ್ಧ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ದೀದಿ ನಡೆ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಎಂದು ಕರೆದಿದೆ.

ಟಿಎಂಸಿ ಪಕ್ಷದ ಪರ ಕೆಲಸ ಮಾಡುತ್ತಿರುವ ಐ-ಪ್ಯಾಕ್ ಕಚೇರಿಗಳ ಮೇಲೆ ದಾಳಿ ನಡೆಯುತ್ತಿರುವ ವೇಳೆ ಬಂಗಾಳ ಸಿಎಂ ಹಾಗೂ ಅಧಿಕಾರಿಗಳು ಹಸ್ತಕ್ಷೇಪ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕುಮಾರ್ ಅವರ ಪೀಠವು, ಇದು ಕೇವಲ ಕೇಂದ್ರ ಮತ್ತು ರಾಜ್ಯದ ನಡುವಿನ ವಿಚಾರವಲ್ಲ. ಬದಲಾಗಿ ಒಂದು ರಾಜ್ಯದ ಮುಖ್ಯಮಂತ್ರಿಯಾಗಿ ಈ ರೀತಿಯ ಕೆಲಸ ಮಾಡಿದ್ದು ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ತಳ್ಳುವ ಯತ್ನವಾಗಿದೆ. ಅದರಲ್ಲೂ ಮುಖ್ಯಮಂತ್ರಿಗಳೇ ಇಂತಹ ಹೆಜ್ಜೆ ಎಂದು ಭಾವಿಸಲಿಲ್ಲ. ಇದು ಅತ್ಯಂತ ಗಂಭೀರ ವಿಚಾರ ಎಂದು ಅಸಮಾಧಾನ ಹೊರಹಾಕಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !