June 18, 2026
Thursday, June 18, 2026
spot_img

SSLC RESULT | ಮಕ್ಕಳೇ ಇಲ್ಲಿ ನೋಡಿ, ಇಂದು ಮಧ್ಯಾಹ್ನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವರ್ಷವಿಡೀ ಕಷ್ಟಪಟ್ಟು ಓದಿದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಇಂದು ತಮ್ಮ ಓದಿನ ಫಲಿತಾಂಶ ಸಿಗಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ಎಂಟು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ವಿದ್ಯಾರ್ಥಿಗಳು ಪಾಸ್‌ ಆಗಬಹುದು ಅಥವಾ ಫೇಲ್‌ ಆಗಬಹುದು ಆದರೆ ಎಲ್ಲವನ್ನೂ ಸಮಾನರೀತಿಯಲ್ಲಿ ತೆಗೆದುಕೊಳ್ಳುವುದು ಮುಖ್ಯವಾಗಿದೆ.

ಈ ಬಾರಿ ರಾಜ್ಯದಲ್ಲಿ ಒಟ್ಟಾರೆ 2,870 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಒಟ್ಟಾರೆ 8,65,988 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅಫಿಶಿಯಲ್‌ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ.

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶದ ಜೊತೆ ಸಿಇಟಿ ಪರೀಕ್ಷೆಗಳು ಕೂಡ ಆರಂಭವಾಗುತ್ತಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !