July 3, 2026
Friday, July 3, 2026
spot_img

ವಾಂಖೆಡೆಯಲ್ಲಿ ಸಂಜು ಭರ್ಜರಿ ಶತಕ: ಮುಂಬೈ ಗೆಲುವಿಗೆ ಬಿಗ್ ಟಾರ್ಗೆಟ್ ನೀಡಿದ ಚೆನ್ನೈ

ಹೊಸ ದಿಗಂತ ಡಿಜಿಟಲ್ ಡೆಸ್ಕ್ :

ವಾಂಖೆಡೆ ಕ್ರೀಡಾಂಗಣದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ಸಂಜು ಸ್ಯಾಮ್ಸನ್ ಭರ್ಜರಿ ಶತಕ ಸಿಡಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ಗೆಲುವಿಗೆ ಚೆನ್ನೈ ಬಿಗ್ ಟಾರ್ಗೆಟ್ ನೀಡಿದೆ.

ಟಾಸ್ ಸೋತು ಬ್ಯಾಟಿಂಗ್ ಇಳಿದ ಚೆನ್ನೈ ಪರ ಸಂಜು ಸ್ಯಾಮ್ಸನ್ ಮುಂಬೈ ಬೌಲರ್‌ಗಳನ್ನು ಮನಬಂದಂತೆ ದಂಡಿಸಿ, ಸಿಕ್ಸರ್ ಮತ್ತು ಬೌಂಡರಿಗಳ ಸುರಿಮಳೆಗೈದರು. ಈ ಮೂಲಕ ಕೇವಲ 54 ಎಸೆತಗಳಲ್ಲಿ ಶತಕ ಸಿಡಿಸಿ ಸಂಭ್ರಮಿಸಿದರು.

ಚೆನ್ನೈ ಪರ ನಾಯಕ ರುತುರಾಜ್ ಗಾಯಕ್ವಾಡ್ 22 ರನ್‌ ಗಳಿಸಿ ಸಂಜು ಸ್ಯಾಮ್ಸನ್ ಜೊತೆ ತಂಡಕ್ಕೆ ಉತ್ತಮ ಆರಂಭ ನೀಡಿದರು. ಬಳಿಕ ಬಂದ ಬಂದ ಸರ್ಫರಾಜ್ ಖಾನ್ 14 ರನ್ ಗಳಿಸಿ ನಿರಾಸೆ ಮೂಡಿಸಿದರು.

ಬಳಿಕ ಬಂದ ಬ್ಯಾಟರ್ ​​ಗಳು ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ಔಟಾಗುತ್ತಿದ್ದರೆ, ಮತ್ತೊಂದು ಕಡೆ ಸಂಜು ಸ್ಪೋಟಕ ಬ್ಯಾಟಿಂಗ್ ನಡೆಸಿ ತಂಡದ ಮೊತ್ತವನ್ನು೨೦೦ ರ ಗಡಿ ದಾಟಿಸಿದರು. ಈ ಮೂಲಕ ಮುಂಬೈ ಗೆಲುವಿಗೆ ಬೃತಃ ಟಾರ್ಗೆಟ್ ನೀಡಿದೆ .

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !