ಹೊಸ ದಿಗಂತ ಡಿಜಿಟಲ್ ಡೆಸ್ಕ್ :
ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಮತ್ತಷ್ಟು ತಾರಕ್ಕೇರಿದ್ದು, ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ನಿಯಂತ್ರಣ ಬಿದ್ದ ಬೆನ್ನಲ್ಲೇ ಜಾಗತಿಕ ಮಟ್ಟದಲ್ಲಿ ತೈಲ ಪೂರೈಕೆಯಲ್ಲಿ ಅಡೆತಡೆಗಳು ಉಂಟಾಗಿದೆ. ಇತ್ತ ಭಾರತದಲ್ಲಿ ಇಂಧನ ಕೊರತೆ ಉಂಟಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಆದರೆ ಈ ಎಲ್ಲಾ ಗೊಂದಲಗಳಿಗೆ ಕೇಂದ್ರ ಸರ್ಕಾರ ತೆರೆ ಎಳೆದಿದೆ.
ಈ ಕುರಿತಾ ಊಹಾಪೋಹಗಳಿಗೆ ತೆರೆ ಎಳೆದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ, ಅಂತಹ ಯಾವುದೇ ಸನ್ನಿವೇಶ ಉಂಟಾಗಲಿಲ್ಲ. ಅದೆಲ್ಲವೂ ಜನರನ್ನು ದಾರಿ ತಪ್ಪಿಸುವ ಸುಳ್ಳು ಸುದ್ದಿಗಳಾಗಿವೆ ಎಂದು ತಿಳಿಸಿದೆ.
ವರದಿಗಳು ನಾಗರಿಕರಲ್ಲಿ ಭಯವನ್ನು ಸೃಷ್ಟಿ ಸುತ್ತಿದೆ. ಆದರೆ ಜನರು ಯಾವುದೇ ರೀತಿಯ ಸುದ್ದಿಗಳನ್ನು ನಂಬಬೇಡಿ. ಅದೆಲ್ಲವೂ ಭಯ ಮತ್ತು ಭೀತಿಯನ್ನು ಸೃಷ್ಟಿಸುವ ಸಲುವಾಗಿ ಹಬ್ಬಿಸಲಾಗುತ್ತಿದೆ. ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಅಡೆತಡೆಗಳಿದ್ದರೂ ಕೂಡ ಭಾರತದಲ್ಲಿ ಯಾವುದೇ ರೀತಿಯ ಸಮಸ್ಯೆ ಉಂಟಾಗಲಿಲ್ಲ. ಹೀಗಾಗಿ ನಮ್ಮ ಮುಂದೆ ಇಂಧನ ಬೆಲೆಗಳನ್ನು ಹೆಚ್ಚಿಸುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಸಚಿವಾಲಯ ಹೇಳಿದೆ.



