April 24, 2026
Friday, April 24, 2026
spot_img

ರಾಜಸ್ಥಾನದಲ್ಲಿ ಕಾರು-ಟ್ರಕ್ ನಡುವೆ ಭೀಕರ ಅಪಘಾತ: ಮೂವರು ಸಜೀವ ದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಜೀವ ದಹನವಾಗಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಪಿಲಾನಿ–ಸಾದುಲ್‌ಪುರ ರಸ್ತೆಯ ತ್ರಿಪಾಲಿ ಟೋಲ್ ಪ್ಲಾಜಾ ಬಳಿ ಈ ದುರಂತ ನಡೆದಿದೆ.

ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದ ಮಹೀಂದ್ರಾ ಬೊಲೆರೊ ಕಾರು ಡಂಪರ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಕ್ಷಣಾರ್ಧದಲ್ಲೇ ಎರಡೂ ವಾಹನಗಳಿಗೆ ಬೆಂಕಿ ತಗುಲಿತು. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:

ಗಾಯಗೊಂಡ ಐವರನ್ನು ತಕ್ಷಣ ಪಿಲಾನಿಯ ಬಿರ್ಲಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜೈಪುರಕ್ಕೆ ರವಾನಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !