April 24, 2026
Friday, April 24, 2026
spot_img

National Panchayati Raj Day | ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಇತಿಹಾಸ, ಮಹತ್ವ ಗೊತ್ತಿಲ್ಲಾಂದ್ರೆ ಹೇಗೆ?

ಭಾರತದ ಗ್ರಾಮೀಣ ಆಡಳಿತ ವ್ಯವಸ್ಥೆಯ ಬಲವಾದ ಅಸ್ತಿವಾರವೇ ಪಂಚಾಯತ್ ರಾಜ್ ವ್ಯವಸ್ಥೆ. ಪ್ರತಿ ವರ್ಷ ಏಪ್ರಿಲ್ 24ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನು ಆಚರಿಸಲಾಗುತ್ತದೆ. ಇದು ಗ್ರಾಮ ಮಟ್ಟದ ಪ್ರಜಾಪ್ರಭುತ್ವದ ಮಹತ್ವವನ್ನು ನೆನಪಿಸುವ ದಿನವಾಗಿದೆ.

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಹಿನ್ನೆಲೆ 1992ರಲ್ಲಿ ಅಂಗೀಕರಿಸಲ್ಪಟ್ಟ 73ನೇ ಸಂವಿಧಾನ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದೆ. ಈ ತಿದ್ದುಪಡಿ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆಗೆ ಸಂವಿಧಾನಿಕ ಸ್ಥಾನಮಾನ ನೀಡಲಾಯಿತು. ನಂತರ 1993ರ ಏಪ್ರಿಲ್ 24ರಿಂದ ಈ ವ್ಯವಸ್ಥೆ ಅಧಿಕೃತವಾಗಿ ಜಾರಿಗೆ ಬಂತು. ಇದೇ ಕಾರಣಕ್ಕೆ ಈ ದಿನವನ್ನು ರಾಷ್ಟ್ರೀಯ ಪಂಚಾಯತ್ ರಾಜ್ ದಿನವಾಗಿ ಆಚರಿಸಲಾಗುತ್ತದೆ.

ಪಂಚಾಯತ್ ರಾಜ್ ವ್ಯವಸ್ಥೆಯ ಮುಖ್ಯ ಉದ್ದೇಶ ಗ್ರಾಮ ಮಟ್ಟದಲ್ಲೇ ಜನರಿಗೆ ಆಡಳಿತದಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸುವುದು. ಸ್ಥಳೀಯ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲೇ ಪರಿಹರಿಸುವುದಕ್ಕೆ ಇದು ಸಹಕಾರಿ. ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಎಂಬ ಮೂರು ಹಂತಗಳಲ್ಲಿ ಈ ವ್ಯವಸ್ಥೆ ಕಾರ್ಯನಿರ್ವಹಿಸುತ್ತದೆ.

ಇದನ್ನೂ ಓದಿ:

ಈ ದಿನದ ಮಹತ್ವವೆಂದರೆ ಗ್ರಾಮೀಣ ಅಭಿವೃದ್ಧಿಯಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವುದು. ಮಹಿಳೆಯರು ಮತ್ತು ಹಿಂದುಳಿದ ವರ್ಗಗಳಿಗೆ ರಾಜಕೀಯದಲ್ಲಿ ಅವಕಾಶ ಸಿಗಲು ಇದು ಪ್ರಮುಖ ವೇದಿಕೆ ಆಗಿದೆ. ಗ್ರಾಮೀಣ ಸ್ವರಾಜ್ಯದ ಕನಸನ್ನು ಸಾಕಾರಗೊಳಿಸಲು ಪಂಚಾಯತ್ ರಾಜ್ ವ್ಯವಸ್ಥೆ ಮಹತ್ವದ ಪಾತ್ರ ವಹಿಸುತ್ತಿದೆ.

ಹೀಗಾಗಿ, ರಾಷ್ಟ್ರೀಯ ಪಂಚಾಯತ್ ರಾಜ್ ದಿನವು ಕೇವಲ ಆಚರಣೆ ಮಾತ್ರವಲ್ಲ, ಗ್ರಾಮೀಣ ಪ್ರಜಾಪ್ರಭುತ್ವದ ಶಕ್ತಿಯನ್ನು ನೆನಪಿಸುವ ಮಹತ್ವದ ದಿನವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !