April 25, 2026
Saturday, April 25, 2026
spot_img

ಶಾಂತಿ ಸಂಧಾನ | ಪಾಕ್ ಗೆ ಅರಾಗ್ಚಿ ಆಗಮನ: ನೇರ ಮಾತುಕತೆಗೆ ‘ನೋ’ ಎಂದ ಇರಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇರಾನ್ ಮತ್ತು ಅಮೆರಿಕ ನಡುವಿನ ಎರಡನೇ ಹಂತದ ಶಾಂತಿ ಮಾತುಕತೆಗೆ ಸಿದ್ಧತೆ ಜೋರಾಗಿದ್ದು, ಈ ಮಹತ್ವದ ರಾಜತಾಂತ್ರಿಕ ಪ್ರಕ್ರಿಯೆಗಾಗಿ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ನೇತೃತ್ವದ ನಿಯೋಗ ಪಾಕಿಸ್ತಾನಕ್ಕೆ ಆಗಮಿಸಿದೆ. ಈ ಭೇಟಿಯು ಪ್ರದೇಶದ ರಾಜಕೀಯ ವಾತಾವರಣದಲ್ಲಿ ಮಹತ್ವದ ಬೆಳವಣಿಗೆ ಎಂದು ಪರಿಗಣಿಸಲಾಗಿದೆ.

ಶುಕ್ರವಾರ ರಾತ್ರಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯಲ್ಲಿ ಬಂದಿಳಿದ ಅರಾಗ್ಚಿಯನ್ನು ಪಾಕಿಸ್ತಾನದ ಉಪ ಪ್ರಧಾನಿ ಹಾಗೂ ವಿದೇಶಾಂಗ ಸಚಿವ ಇಷಾಕ್ ದಾರ್, ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಮತ್ತು ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಸ್ವಾಗತಿಸಿದರು.

ಇದನ್ನೂ ಓದಿ:

ಅಮೆರಿಕದ ವಿಶೇಷ ಪ್ರತಿನಿಧಿಗಳಾದ ಸ್ಟೀವ್ ವಿಟ್ಕಾಫ್ ಮತ್ತು ಜೇರೆಡ್ ಕುಶ್ನರ್ ಶನಿವಾರ ಪಾಕಿಸ್ತಾನ ತಲುಪುವ ನಿರೀಕ್ಷೆಯಿದೆ. ಆದರೆ ಇರಾನ್, ಅಮೆರಿಕದೊಂದಿಗೆ ನೇರ ಮಾತುಕತೆ ನಡೆಸುವುದನ್ನು ತಾತ್ಕಾಲಿಕವಾಗಿ ನಿರಾಕರಿಸಿದ್ದು, ತನ್ನ ಸಂದೇಶಗಳನ್ನು ಪಾಕಿಸ್ತಾನದ ಮೂಲಕ ರವಾನಿಸುವುದಾಗಿ ತಿಳಿಸಿದೆ.

ಈ ಮಾತುಕತೆಯಲ್ಲಿ ಹಾರ್ಮುಜ್ ಜಲಸಂಧಿಯ ಉದ್ವಿಗ್ನತೆ ಕಡಿಮೆ ಮಾಡುವುದು ಮತ್ತು ಶಾಶ್ವತ ಕದನ ವಿರಾಮ ಸಾಧಿಸುವುದು ಪ್ರಮುಖ ಅಂಶಗಳಾಗಿವೆ. ಜೊತೆಗೆ ಇರಾನ್ ತನ್ನ ಮೇಲೆ ಹೇರಿರುವ ಆರ್ಥಿಕ ನಿರ್ಬಂಧಗಳನ್ನು ತೆಗೆದುಹಾಕುವಂತೆ ಒತ್ತಾಯಿಸುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !