October 15, 2026
Thursday, October 15, 2026
spot_img

WEATHER | ಕರ್ನಾಟಕದಲ್ಲಿ ಬಿಸಿಲು-ಮಳೆ ಆಟ: ಆರೋಗ್ಯದ ಬಗ್ಗೆ ಕಾಳಜಿ ಇರ್ಲಿ ಅಂತಿದ್ದಾರೆ ವೈದ್ಯರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಒಂದೆಡೆ ತೀವ್ರ ಬಿಸಿಲು ಜನರನ್ನು ಕಂಗೆಡಿಸುತ್ತಿದ್ದರೆ, ಮತ್ತೊಂದೆಡೆ ಕೆಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಆಲಿಕಲ್ಲು ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಕೆಲ ದಿನಗಳಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.

ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮಲೆನಾಡು ಭಾಗಗಳಲ್ಲೂ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮಾತ್ರ ಉಷ್ಣ ಅಲೆಯ ತೀವ್ರತೆ ಮುಂದುವರಿಯಲಿದ್ದು, ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಇದನ್ನೂ ಓದಿ:

ಹವಾಮಾನ ಬದಲಾವಣೆಯ ನಡುವೆಯೇ ಆರೋಗ್ಯದ ಮೇಲೂ ವಿಶೇಷ ಕಾಳಜಿ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಬೆಳಗ್ಗೆ ತಡವಾಗಿ ಮತ್ತು ಮಧ್ಯಾಹ್ನದ ವೇಳೆಯಲ್ಲಿ ಅನಗತ್ಯವಾಗಿ ಹೊರಗೆ ಓಡಾಡುವುದನ್ನು ತಪ್ಪಿಸಬೇಕು ಎಂದು ಸೂಚಿಸಲಾಗಿದೆ.

ದೇಹದಲ್ಲಿ ನೀರಿನಾಂಶ ಕಡಿಮೆಯಾಗದಂತೆ ಸಾಕಷ್ಟು ನೀರು ಕುಡಿಯುವುದು, ಎಳನೀರು, ಮಜ್ಜಿಗೆ ಹಾಗೂ ತಾಜಾ ಹಣ್ಣಿನ ರಸ ಸೇವಿಸುವುದು ಒಳಿತು. ಹೊರಗೆ ಹೋಗುವಾಗ ಛತ್ರಿ, ಟೋಪಿ ಬಳಸುವುದು ಹಾಗೂ ಹಗುರವಾದ ಹತ್ತಿ ಬಟ್ಟೆ ಧರಿಸುವುದು ಉಷ್ಣಾಘಾತದಿಂದ ರಕ್ಷಿಸಿಕೊಳ್ಳಲು ಸಹಕಾರಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Must Read