October 10, 2026
Saturday, October 10, 2026
spot_img

ಶ್ವೇತಭವನದ ಔತಣಕೂಟದ ವೇಳೆ ಗುಂಡಿನ ದಾಳಿ: ಭಾಷಣ ನಿಲ್ಲಿಸಿ ಓಡಿದ ದೊಡ್ಡಣ್ಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿಯಲ್ಲಿ ನಡೆದ ಶ್ವೇತಭವನದ ವಾರ್ಷಿಕ ಔತಣಕೂಟದ ವೇಳೆ ಗುಂಡಿನ ದಾಳಿ ಸಂಭವಿಸಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ವೇಳೆ ಹೊರಗಡೆ ಹಲವು ಬಾರಿ ಗುಂಡಿನ ಸದ್ದು ಕೇಳಿಬಂದಿದೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೇದಿಕೆಗೆ ಆಗಮಿಸಲು ಸಿದ್ಧವಾಗುತ್ತಿದ್ದ ಕ್ಷಣದಲ್ಲಿ ದಾಳಿ ನಡೆದಿದ್ದು, ಭದ್ರತಾ ಪಡೆಗಳು ತಕ್ಷಣವೇ ಟ್ರಂಪ್, ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಹಾಗೂ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿವೆ. ಸ್ಥಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ:

ಘಟನೆಯ ಬಳಿಕ ಒಬ್ಬ ಶಂಕಿತನನ್ನು ಬಂಧಿಸಲಾಗಿದ್ದು, ಒಬ್ಬ ಸೀಕ್ರೆಟ್ ಸರ್ವಿಸ್ ಏಜೆಂಟ್ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಹಾಲ್‌ನಲ್ಲಿದ್ದವರು ಟೇಬಲ್‌ಗಳ ಕೆಳಗೆ ಅಡಗಿಕೊಂಡು ಆತಂಕದಲ್ಲಿದ್ದರು.

ಈ ಬಗ್ಗೆ ಟ್ರಂಪ್ ಪ್ರತಿಕ್ರಿಯೆ ನೀಡಿದ್ದು, ಭದ್ರತಾ ಪಡೆಗಳ ತಕ್ಷಣದ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದಾರೆ. ಶ್ವೇತಭವನ ಹಾಗೂ ಪ್ರಮುಖ ಸರ್ಕಾರಿ ಕಟ್ಟಡಗಳ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ತನಿಖೆ ಮುಂದುವರಿದಿದೆ.

Must Read