April 26, 2026
Sunday, April 26, 2026
spot_img

ಕೊಹ್ಲಿ ಆಟದ ಮುಂದೆ ನಡೆಯುತ್ತಾ ಅಕ್ಷರ್ ತಂತ್ರ? DC vs RCB ಮಹಾ ಸಂಗ್ರಾಮಕ್ಕೆ ಕೌಂಟ್ ಡೌನ್ ಶುರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 39 ನೇ ಪಂದ್ಯವು ಇಂದು ಕ್ರಿಕೆಟ್ ಪ್ರಿಯರ ಕುತೂಹಲ ಕೆರಳಿಸಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಹಣಾಹಣಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ.

ಈ ಋತುವಿನಲ್ಲಿ ಈ ಎರಡು ತಂಡಗಳು ಎರಡನೇ ಬಾರಿಗೆ ಪರಸ್ಪರ ಸೆಣಸುತ್ತಿವೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದಲ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆರ್​​ಸಿಬಿಯನ್ನು ಅವರದೇ ತವರಿನಲ್ಲಿ ಸೋಲಿಸಿತ್ತು. ಹೀಗಾಗಿ, ಇಂದಿನ ಪಂದ್ಯವು ಆರ್​​ಸಿಬಿಗೆ ಕೇವಲ ಪಂದ್ಯವಲ್ಲ, ಬದಲಾಗಿ ಮೊದಲ ಸೋಲಿಗೆ ಸೇಡು ತೀರಿಸಿಕೊಳ್ಳುವ ಸುಸಮಯವಾಗಿದೆ.

ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗುಬಡಿದಿರುವ ವಿರಾಟ್ ಕೊಹ್ಲಿ ಪಡೆ ಸದ್ಯ ಗೆಲುವಿನ ಲಯದಲ್ಲಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸಮತೋಲನ ಕಾಯ್ದುಕೊಂಡಿರುವ ಬೆಂಗಳೂರು ತಂಡ ಪೂರ್ಣ ಆತ್ಮವಿಶ್ವಾಸದಲ್ಲಿದೆ.

ಮತ್ತೊಂದೆಡೆ, ಪಂಜಾಬ್ ಕಿಂಗ್ಸ್ ವಿರುದ್ಧದ ಕಳೆದ ಪಂದ್ಯದಲ್ಲಿ ಸೋಲು ಅನುಭವಿಸಿರುವ ಡೆಲ್ಲಿ ಕ್ಯಾಪಿಟಲ್ಸ್, ಸ್ವಂತ ಮೈದಾನದಲ್ಲಿ ಮತ್ತೆ ಗೆಲುವಿನ ಹಳಿಗೆ ಮರಳಲು ಕಾಯುತ್ತಿದೆ. ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಪಡೆಗೆ ತವರಿನ ಬೆಂಬಲ ಪ್ಲಸ್ ಪಾಯಿಂಟ್ ಆಗಲಿದೆ.

ಪಂದ್ಯದ ಸಂಪೂರ್ಣ ವಿವರಗಳು:

ದಿನಾಂಕ: ಏಪ್ರಿಲ್ 27, 2026 (ಸೋಮವಾರ)

ಸ್ಥಳ: ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ

ಸಮಯ: ರಾತ್ರಿ 7:30 ಕ್ಕೆ (ಟಾಸ್ ಪ್ರಕ್ರಿಯೆ ಸಂಜೆ 7:00 ಕ್ಕೆ)

ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಜಿಯೋ ಸಿನಿಮಾ ಆ್ಯಪ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !