April 27, 2026
Monday, April 27, 2026
spot_img

ಕೇಜ್ರಿವಾಲ್ ಹೊಸ ‘ಸತ್ಯಾಗ್ರಹ’: ಹೈಕೋರ್ಟ್ ವಿಚಾರಣೆಗೆ ಬರೋದಿಲ್ಲ ಎಂದ ಮಾಜಿ ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತೆಗೆದುಕೊಂಡಿರುವ ನಿರ್ಧಾರ ರಾಜಕೀಯ ಮತ್ತು ಕಾನೂನು ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಗೆ ತಾವು ಅಥವಾ ತಮ್ಮ ಪರ ವಕೀಲರು ಹಾಜರಾಗುವುದಿಲ್ಲ ಎಂದು ಕೇಜ್ರಿವಾಲ್ ಲಿಖಿತವಾಗಿ ತಿಳಿಸಿದ್ದಾರೆ.

ತಮ್ಮ ಈ ನಿರ್ಧಾರವನ್ನು ಕೇಜ್ರಿವಾಲ್ ‘ಸತ್ಯಾಗ್ರಹ’ ಎಂದು ಬಣ್ಣಿಸಿದ್ದು, ನೈತಿಕತೆ ಮತ್ತು ಅಂತರಾತ್ಮದ ಧ್ವನಿಗೆ ಗೌರವ ನೀಡಿ ಈ ಹೆಜ್ಜೆ ಇಟ್ಟಿದ್ದಾಗಿ ಹೇಳಿದ್ದಾರೆ. ವಿಚಾರಣೆಗೆ ಗೈರಾಗುವುದರಿಂದ ಕಾನೂನಾತ್ಮಕ ಪರಿಣಾಮ ಎದುರಾಗಬಹುದು ಎಂಬ ಅರಿವು ಇದ್ದರೂ, ತಮ್ಮ ನಿಲುವಿನಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:

ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಕುರಿತು ಅಪನಂಬಿಕೆ ವ್ಯಕ್ತಪಡಿಸಿರುವ ಕೇಜ್ರಿವಾಲ್, ನ್ಯಾಯ ಪ್ರಕ್ರಿಯೆಯ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಆದರೆ ಈ ಅಪನಂಬಿಕೆ ಕೇವಲ ಈ ಪ್ರಕರಣಕ್ಕೆ ಮಾತ್ರ ಸೀಮಿತ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದೀಗ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ಕೇಜ್ರಿವಾಲ್ ತೀರ್ಮಾನಿಸಿದ್ದು, ಮುಂದಿನ ಬೆಳವಣಿಗೆಗಳು ದೇಶದ ರಾಜಕೀಯದಲ್ಲಿ ಕುತೂಹಲ ಮೂಡಿಸಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !