April 27, 2026
Monday, April 27, 2026
spot_img

ಕಿಂಗ್ ಕೊಹ್ಲಿ @9000: ಇವತ್ತಿನ ಪಂದ್ಯದಲ್ಲಿ ಸೃಷ್ಟಿಯಾಗಲಿದೆಯೇ ಹೊಸ ಮೈಲಿಗಲ್ಲು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಧಾರಸ್ತಂಭ ವಿರಾಟ್ ಕೊಹ್ಲಿ ಮತ್ತೊಂದು ಅಪ್ರತಿಮ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಇಂದು ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಕೇವಲ 11 ರನ್ ಗಳಿಸಿದರೆ, ಐಪಿಎಲ್‌ನಲ್ಲಿ 9,000 ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಕೀರ್ತಿಗೆ ಭಾಜನರಾಗಲಿದ್ದಾರೆ.

2008ರ ಚೊಚ್ಚಲ ಆವೃತ್ತಿಯಿಂದಲೂ ಆರ್‌ಸಿಬಿ ತಂಡದ ಪರ ಆಡುತ್ತಿರುವ ಕೊಹ್ಲಿ, ಲೀಗ್‌ನ ಅತ್ಯಂತ ಯಶಸ್ವಿ ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ. ಪ್ರಸ್ತುತ 274 ಪಂದ್ಯಗಳನ್ನು ಆಡಿರುವ ಅವರು ಒಟ್ಟು 8,989 ರನ್ ಕಲೆಹಾಕಿದ್ದಾರೆ. ಈ ಮೈಲಿಗಲ್ಲು ತಲುಪುವ ಮೂಲಕ ಅವರು ಕ್ರಿಕೆಟ್ ಜಗತ್ತಿನಲ್ಲಿ ತಮ್ಮ ಅಧಿಪತ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಲಿದ್ದಾರೆ.

ಈ ಬಾರಿಯ ಐಪಿಎಲ್‌ನಲ್ಲೂ ವಿರಾಟ್ ಬ್ಯಾಟ್ ಅಬ್ಬರಿಸುತ್ತಿದೆ. ಕೇವಲ 7 ಇನ್ನಿಂಗ್ಸ್‌ಗಳಲ್ಲಿ 328 ರನ್ ಗಳಿಸಿರುವ ಅವರು ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಈ ಐತಿಹಾಸಿಕ ಸಾಧನೆ ಮೂಡಿಬರುವ ನಿರೀಕ್ಷೆಯಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !