August 26, 2026
Wednesday, August 26, 2026
spot_img

‘ಮಹಾ’ ಆಟೋ, ಟ್ಯಾಕ್ಸಿ ಚಾಲಕರಿಗೆ ರಿಲೀಫ್: ಮರಾಠಿ ಕಡ್ಡಾಯ ಆದೇಶಕ್ಕೆ ಬ್ರೇಕ್ ಹಾಕಿದ ಫಡ್ನವಿಸ್ ಸರ್ಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದಲ್ಲಿ ಎಲ್ಲಾ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರು ಕಡ್ಡಾಯವಾಗಿ ಮರಾಠಿ ಭಾಷೆಯನ್ನು ಮಾತನಾಡಬೇಕೆಂಬ ಆದೇಶಕ್ಕೆ ಸಿಎಂ ದೇವೇಂದ್ರ ಫಡ್ನವಿಸ್ ಸರಕಾರ ಸದ್ಯಕ್ಕೆ ತಡೆ ನೀಡಿದ್ದು, ಈ ನಿರ್ಧಾರವನ್ನು ಆರು ತಿಂಗಳ ಕಾಲ ಮುಂದೂಡಿದೆ.

ಈ ಹಿಂದೆ ಮೇ 1 ರಿಂದ ಎಲ್ಲಾ ಚಾಲಕರು ಮರಾಠಿಯಲ್ಲಿ ಮಾತನಾಡಲು, ಓದಲು ಮತ್ತು ಬರೆಯಲು ತಿಳಿದಿರಬೇಕು ಎಂದು ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಅವರು ಆದೇಶ ಹೊರಡಿಸಿದ್ದರು. ಇಲ್ಲವಾದಲ್ಲಿ ಚಾಲಕರ ಪರವಾನಗಿ ರದ್ದುಗೊಳಿಸುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಇದರ ಬೆನ್ನಲ್ಲೇ ಚಾಲಕ ಸಂಘಟನೆಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು.

ಹೀಗಾಗಿ ಇಂದು ಫಡ್ನವಿಸ್ ನೇತೃತ್ವದ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಜೊತೆಗೆ ಚಾಲಕರಿಗೆ ಮರಾಠಿ ಕಲಿಯಲು ಆರು ತಿಂಗಳ ಕಾಲಾವಕಾಶ ನೀಡಲಾಗಿದ್ದು, ಇದಕ್ಕಾಗಿ ಸರಕಾರವೇ ವಿಶೇಷ ಪಠ್ಯಕ್ರಮ ಮತ್ತು ತರಬೇತಿ ಶಿಬಿರಗಳನ್ನು ನಡೆಸಲು ಮುಂದಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !