August 4, 2026
Tuesday, August 4, 2026
spot_img

ಹರಿಯಾಣದಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌: ಇಬ್ಬರು ಸಜೀವ ದಹನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹರಿಯಾಣದಲ್ಲಿ ಖಾಸಗಿ ಬಸ್‌ವೊಂದು ಹೊತ್ತಿ ಉರಿದಿದ್ದು, ಇಬ್ಬರು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಭಿವಾನಿ-ಹನ್ಸಿ ರಸ್ತೆಯಲ್ಲಿ ತೆರಳುತ್ತಿದ್ದ ಖಾಸಗಿ ಬಸ್‌ಗೆ ಮಿಲ್ಕ್‌ಪುರ ಗ್ರಾಮದ ಬಳಿ ಏಕಾಏಕಿ ಬೆಂಕಿ ಹೊತ್ತಿದೆ.

ಈ ಅಪಘಾತದಲ್ಲಿ ಆರು ಮಂದಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಭಿವಾನಿಯಿಂದ ಹನ್ಸಿ ಕಡೆಗೆ ಬಸ್‌ ಹೋಗುತ್ತಿದ್ದ ವೇಳೆ ದುರಂತ ಸಂಭವಿಸಿದೆ.

ಯಾವ ಕಾರಣದಿಂದ ಬಸ್‌ಗೆ ಬೆಂಕಿ ಹೊತ್ತಿದೆ ಎಂದು ತಿಳಿದುಬಂದಿಲ್ಲ. ಹೆಚ್ಚಿನ ಪ್ರಯಾಣಿಕರು ಬೆಂಕಿ ಹೊತ್ತಿದ ತಕ್ಷಣವೇ ಕಿಟಕಿ ಹಾಗೂ ಬಾಗಿಲುಗಳಿಂದ ಕೆಳಕ್ಕೆ ಇಳಿದಿದ್ದಾರೆ. ಸುಟ್ಟಗಾಯಗಳಿಂದ ಹಾಗೂ ಉಸಿರು ಕಟ್ಟಿ ಇಬ್ಬರು ಮೃತಪಟ್ಟಿದ್ದಾರೆ.

ಬೆಂಕಿ ಕಾಣಿಸಿದಾಗ ಮಧ್ಯರಾತ್ರಿಯಾಗಿದ್ದು, ಸುತ್ತಮುತ್ತ ಓಡಾಡುತ್ತಿದ್ದ ಜನ ಸಹಾಯಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಹನ್ಸಿ ಸಿವಿಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !