June 18, 2026
Thursday, June 18, 2026
spot_img

ಡಿ.ಕೆ. ಶಿವಕುಮಾರ್ ಸಿಎಂ ಪಟ್ಟಕ್ಕೆ ಏರಲು ಡೇಟ್ ಫಿಕ್ಸ್? ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಭಾರೀ ಸದ್ದು ಮಾಡುತ್ತಿದ್ದು, ಈಗಾಗಲೇ ಶಾಸಕರ ದಂಡು ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿ ಮಾತುಕತೆ ನಡೆಸುತ್ತಿದೆ. ಇದರ ನಡುವೆ ಮೇ 15ರ ಒಳಗಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಈಗಾಗಲೇ ಹಲವು ಬಾರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವ ಕುರಿತು ಹೇಳಿಕೆ ನೀಡಿದ್ದ ಇಕ್ಬಾಲ್ ಹುಸೇನ್ ಇದೀಗ ಮತ್ತೊಮ್ಮೆ ಡೇಟ್ ನೀಡಿದ್ದು, ಮೇ 15 ರ ಒಳಗೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂಬುದು ನನ್ನ ಆಸೆ ಮಾತ್ರವಲ್ಲ, ಅನೇಕ ಶಾಸಕರ ಬಯಕೆ. ಡಿಕೆಶಿ ಅವರ ಆಡಳಿತದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯಲಿದೆ. ಹೀಗಾಗಿ ಮೇ 15ರ ಒಳಗಾಗಿ ಬಹುತೇಕ ಸಿಎಂ ಪಟ್ಟಕ್ಕೆ ಏರುತ್ತಾರೆ ಎಂಬ ಭವಿಷ್ಯ ನುಡಿದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !