April 29, 2026
Wednesday, April 29, 2026
spot_img

ಕಲ್ಮಾ ಪಠಿಸಲ್ಲ ಎಂದ ಸೆಕ್ಯುರಿಟಿಗೆ ಚಾಕುವಿನಿಂದ ಇರಿತ: ಆರೋಪಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭದ್ರತಾ ಸಿಬ್ಬಂದಿಯ ಧರ್ಮ ವಿಚಾರಿಸಿ ಹಲ್ಲೆ ನಡೆಸಿದ ಪ್ರಕರಣವು ಮುಂಬೈನಲ್ಲಿ ಆತಂಕಕ್ಕೆ ಕಾರಣವಾಗಿದೆ. ಇಬ್ಬರು ಕಾವಲುಗಾರರ ಮೇಲೆ ಚೂರಿಯಿಂದ ದಾಳಿ ನಡೆಸಿದ ಆರೋಪದಡಿ 31 ವರ್ಷದ ಜೈಬ್ ಜುಬೇರ್ ಅನ್ಸಾರಿ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

ಮುಂಬೈನ ನಯಾ ನಗರ ಪ್ರದೇಶದಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಬಳಿ ಸೋಮವಾರ ಮುಂಜಾನೆ ಈ ಘಟನೆ ನಡೆದಿದೆ. ಕರ್ತವ್ಯದಲ್ಲಿದ್ದ ಇಬ್ಬರು ಭದ್ರತಾ ಸಿಬ್ಬಂದಿಯ ಬಳಿ ಆರೋಪಿ ಕಲ್ಮಾ ಪಠಿಸಲು ಹೇಳಿದ್ದಾನೆ. ಸೆಕ್ಯುರಿಟಿ ಕಲ್ಮಾ ಪಠಣ ಮಾಡದೆ ಇದ್ದಾಗ ಏಕಾಏಕಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ:

ಗಾಯಗೊಂಡ ಇಬ್ಬರನ್ನೂ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಸ್ಥಳದಲ್ಲಿದ್ದ ಸ್ಥಳೀಯ ವ್ಯಕ್ತಿಯೊಬ್ಬರು ಗಾಯಾಳುಗಳಿಗೆ ನೆರವಾಗಿ ಆಸ್ಪತ್ರೆಗೆ ಸೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಘಟನೆಯ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿ ಅಲ್ಪ ಸಮಯದಲ್ಲೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಕೊಲೆ ಯತ್ನ ಹಾಗೂ ಸಮಾಜದಲ್ಲಿ ದ್ವೇಷ ಹರಡುವ ಉದ್ದೇಶದ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಲಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಪ್ರಕರಣದ ಹಿನ್ನೆಲೆ ತಿಳಿಯಲು ಆರೋಪಿಯ ಮೊಬೈಲ್ ಮತ್ತು ಇತರೆ ಎಲೆಕ್ಟ್ರಾನಿಕ್ ಸಾಧನಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !