April 29, 2026
Wednesday, April 29, 2026
spot_img

ಬೆಂಗಳೂರಿಗೆ ತಂಪೆರೆದ ವರುಣ: ಏ.30ರವರೆಗೆ ರಾಜ್ಯದಲ್ಲಿ ಮಳೆ ಇದ್ಯಂತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಲ ದಿನಗಳಿಂದ ಉರಿಬಿಸಿಲಿಗೆ ಬೇಸತ್ತಿದ್ದ ಜನತೆಗೆ ಮಳೆರಾಯ ಕೊಂಚ ನೆಮ್ಮದಿ ತಂದಿದ್ದಾನೆ. ಬೆಂಗಳೂರು ಸೇರಿದಂತೆ ನಗರದ ಹಲವು ಭಾಗಗಳಲ್ಲಿ ಸಂಜೆ ವೇಳೆಗೆ ತುಂತುರು ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ, ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಹಾಗೂ ಗಂಟೆಗೆ 40ರಿಂದ 50 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯ ಸಾಧ್ಯತೆಯೂ ಇದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ:

ನಗರದ ಬಾಣಸವಾಡಿ, ಕಲ್ಯಾಣನಗರ, ನಾಗವಾರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಂಜೆ ವೇಳೆಗೆ ತುಂತುರು ಮಳೆ ಸುರಿದಿದ್ದು, ದಿನಪೂರ್ತಿ ಕಾಡಿದ್ದ ಬಿಸಿಲಿನ ತಾಪಕ್ಕೆ ತಾತ್ಕಾಲಿಕ ವಿರಾಮ ಸಿಕ್ಕಂತಾಗಿದೆ.

ಸಂಜೆಯಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ತಂಪಾದ ಹವೆಯಿಂದ ಜನರು ನಿರಾಳರಾಗಿದ್ದಾರೆ. ಮುಂದಿನ ದಿನಗಳಲ್ಲೂ ಇದೇ ಮಾದರಿಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !