October 10, 2026
Saturday, October 10, 2026
spot_img

ಮೇಘಾಲಯ ಹನಿಮೂನ್ ಮರ್ಡರ್ ಕೇಸ್: ಆರೋಪಿ ಪತ್ನಿಗೆ ಸಿಕ್ಕೇಬಿಡ್ತು ಜಾಮೀನು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದ ಗಮನ ಸೆಳೆದಿದ್ದ ಮೇಘಾಲಯ ಹನಿಮೂನ್ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸೋನಾಮ್ ರಘುವಂಶಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

2025ರಲ್ಲಿ ಮೇಘಾಲಯಕ್ಕೆ ಹನಿಮೂನ್‌ಗೆ ತೆರಳಿದ್ದ ವೇಳೆ ಪತಿ ರಾಜಾ ರಘುವಂಶಿ ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದರು. ಕೆಲ ದಿನಗಳ ಬಳಿಕ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಸೊಹ್ರಾ ಪ್ರದೇಶದ ಜಲಪಾತದ ಸಮೀಪ ಅವರ ಮೃತದೇಹ ಪತ್ತೆಯಾಗಿದ್ದು, ಪ್ರಕರಣ ರಾಷ್ಟ್ರದ ಗಮನ ಸೆಳೆದಿತ್ತು.

ಇದನ್ನೂ ಓದಿ:

ತನಿಖೆಯ ವೇಳೆ ಸೋನಾಮ್ ಹಾಗೂ ಆಕೆಯ ಪ್ರಿಯಕರ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದರು. ಹತ್ಯೆ ಸಂಚು ರೂಪಿಸಿ ಕೃತ್ಯ ಎಸಗಲಾಗಿದೆ ಎಂಬ ಆರೋಪದಡಿ ತನಿಖೆ ಮುಂದುವರಿದಿತ್ತು. ಇದೀಗ ನ್ಯಾಯಾಲಯ ಆರೋಪಿ ಸೋನಾಮ್‌ಗೆ ಷರತ್ತುಬದ್ಧ ಜಾಮೀನು ನೀಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ತನಿಖಾ ಅಧಿಕಾರಿಗಳು, ನ್ಯಾಯಾಲಯದ ಆದೇಶದಂತೆ ಕಾನೂನು ಪ್ರಕ್ರಿಯೆ ಮುಂದುವರಿಯಲಿದ್ದು, ಪ್ರಕರಣದ ವಿಚಾರಣೆ ಮುಂದಿನ ಹಂತದಲ್ಲೂ ಸಾಗಲಿದೆ ಎಂದು ತಿಳಿಸಿದ್ದಾರೆ. ಪ್ರಕರಣದ ಅಂತಿಮ ಸತ್ಯ ಹೊರಬರಲು ತನಿಖೆ ಇನ್ನಷ್ಟು ವೇಗ ಪಡೆಯುವ ಸಾಧ್ಯತೆ ಇದೆ.

Must Read