ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ನಲ್ಲಿ ಇಂದು ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದ ಪರಾಗ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಈ ಬಾರಿಯ ಟೂರ್ನಿಯಲ್ಲಿ ಪಂಜಾಬ್ ತಂಡ ಅಮೋಘ ಪ್ರದರ್ಶನ ನೀಡುತ್ತಿದ್ದು, ಆಡಿದ 7 ಪಂದ್ಯಗಳಲ್ಲಿ 6 ಗೆಲುವು ಮತ್ತು 1 ರದ್ದುಗೊಂಡ ಕಾರಣ ಪಾಯಿಂಟ್ ಟೇಬಲ್ ನಲ್ಲಿ ಮೊದಲ ಸ್ಥಾನದಲ್ಲಿ ಭದ್ರವಾಗಿದೆ. ಇತ್ತ ರಾಜಸ್ಥಾನ್ ರಾಯಲ್ಸ್ ಇದುವರೆಗೆ 8 ಪಂದ್ಯಗಳನ್ನು ಆಡಿದ್ದು, 5 ಗೆಲುವು ಸಾಧಿಸಿದ್ದರೆ, 3 ಪಂದ್ಯಗಳಲ್ಲಿ ಸೋಲಿನೊಂದಿಗೆ 10 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.
ರಾಜಸ್ಥಾನ್ ರಾಯಲ್ಸ್ : ವೈಭವ್ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೀ), ರಿಯಾನ್ ಪರಾಗ್ (ನಾಯಕ), ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ದಸುನ್ ಶಾನಕ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ಬ್ರಿಜೇಶ್ ಶರ್ಮಾ, ಯಶ್ ಪುಂಜಾ
ಪಂಜಾಬ್ ಕಿಂಗ್ಸ್: ಪ್ರಿಯಾಂಶ್ ಆರ್ಯ, ಪ್ರಭಸಿಮ್ರನ್ ಸಿಂಗ್ (ವಿಕೀ), ಕೂಪರ್ ಕೊನೊಲಿ, ಶ್ರೇಯಸ್ ಅಯ್ಯರ್ (ನಾಯಕ), ಸೂರ್ಯಾಂಶ್ ಶೆಡ್ಜ್, ನೆಹಾಲ್ ವಧೇರಾ, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಜಾನ್ಸೆನ್, ಲಾಕಿ ಫರ್ಗುಸನ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್



