April 29, 2026
Wednesday, April 29, 2026
spot_img

ಮಹಿಳಾ ಮೀಸಲಾತಿ ಮಸೂದೆ ಅನುಷ್ಠಾನ ಮಾಡಿಯೇ ಮಾಡುತ್ತೇವೆ: ವಾರಾಣಸಿಯಲ್ಲಿ ಪ್ರಧಾನಿ ಮೋದಿ ಭರವಸೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವಿಪಕ್ಷಗಳು ದ್ರೋಹ ಬಗೆದ ಕಾರಣದಿಂದ ತಡೆಯಾಗಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ತಾನು ಅನುಷ್ಠಾನ ಮಾಡಿಯೇ ಮಾಡುತ್ತೇನೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.

ಉತ್ತರ ಪ್ರದೇಶದ ವಾರಾಣಸಿಯಲ್ಲಿ ಮಹಿಳಾ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಇಂದು ಎಲ್ಲಾ ಆಶೀರ್ವಾದ ಪಡೆಯಲು ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಕಾಶಿಯ ಸಂಸದನಾಗಿ, ಪ್ರಧಾನ ಮಂತ್ರಿಯಾಗಿ, ಈ ದೇಶದ ಹಿತಾಸಕ್ತಿಯ ಗುರಿಯನ್ನು ಸಾಧಿಸಲು ನಿಮ್ಮ ಆಶೀರ್ವಾದ ಬೇಕು ಎಂದು ಹೇಳಿದರು.

ಕಳೆದ 40 ವರ್ಷಗಳಿಂದ ವಿಪಕ್ಷಗಳು ಮಹಿಳೆಯರಿಗೆ ದ್ರೋಹ ಬಗೆಯುತ್ತಾ ಬಂದಿದೆ. ಎಂದಿಗೂ ಹೆಣ್ಣುಮಕ್ಕಳು ವಿಧಾನಸಭೆ ಅಥವಾ ಲೋಕಸಭೆಗೆ ಆಯ್ಕೆಯಾಗುವುದನ್ನು ಬಯಸಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಮಹಿಳೆಯರಿಗೆ ಮೀಸಲಾತಿ ನೀಡುವ ಉದ್ದೇಶದಿಂದ ಮಸೂದೆ ತರಲು ಪ್ರಯತ್ನಿಸಿತ್ತು. ಆದರೆ ಎಸ್‌ಪಿ ಮತ್ತು ಕಾಂಗ್ರೆಸ್‌ನಂತಹ ವಿಪಕ್ಷಗಳು ತಡೆ ನೀಡುವ ಮೂಲಕ ನಮ್ಮ ಯೋಜನೆಗಳನ್ನು ವಿಫಲಗೊಳಿಸಿತು. ಆದರೆ ನಾನು ಭರವಸೆ ನೀಡುತ್ತೇನೆ, ಮುಂದಿನ ದಿನಗಳಲ್ಲಿ ಮೀಸಲಾತಿ ಜಾರಿಗೆ ತರುವ ಯಾವುದೇ ಅವಕಾಶವನ್ನು ಬಿಟ್ಟುಕೊಡುವುದಿಲ್ಲ ಎಂದು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !