April 29, 2026
Wednesday, April 29, 2026
spot_img

ಪಶ್ಚಿಮ ಬಂಗಾಳದಲ್ಲಿ ಇಂದು ಎರಡನೇ ಹಂತದ ಮತದಾನ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನ ಆರಂಭವಾಗಿದೆ.

ಇಂದು ಬೆಳಗ್ಗೆ ಏಳು ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ ಆರು ಗಂಟೆಯವರೆಗೆ ನಡೆಯಲಿದೆ. ಪಶ್ಚಿಮ ಬಂಗಾಳದ 7 ಜಿಲ್ಲೆಗಳ 142 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಸುಮಾರು 3.22 ಕೋಟಿ ಮತದಾರರು ಇಂದು 1,448 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.

ಈ ಬಾರಿ ಸಿಎಂ ಮಮತಾ ಬ್ಯಾನರ್ಜಿ ಹಾಗೂ ಬಿಜೆಪಿ ನಾಯಕ ಸುವೇಂದು ಅಧಿಕಾರಿ ನಡುವೆ ಪೈಪೋಟಿ ನಡೆಯಲಿದೆ. ಸಂಜೆ ಆರುವರೆ ನಂತರ ಎಕ್ಸಿಟ್‌ ಪೋಲ್‌ ಅಂಕಿ ಅಂಶಗಳು ಪ್ರಕಟವಾಗಲಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !