April 29, 2026
Wednesday, April 29, 2026
spot_img

‘ಒಪೆಕ್‌’ಗೆ ಯುಎಇ ಟಾಟಾ-ಬೈಬೈ: ಜಾಗತಿಕ ತೈಲ ಮಾರುಕಟ್ಟೆಯ ಮೇಲೆ ಬೀಳುತ್ತಾ ಎಫೆಕ್ಟ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾಗತಿಕ ತೈಲ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ಗಮನ ಸೆಳೆದಿದ್ದು, ಯುನೈಟೆಡ್ ಅರಬ್ ಎಮಿರೇಟ್ಸ್ ಒಪೆಕ್‌ ಒಕ್ಕೂಟದಿಂದ ಹೊರಬರುವ ನಿರ್ಧಾರ ಕೈಗೊಂಡಿರುವುದಾಗಿ ಘೋಷಿಸಿದೆ.

ದಶಕಗಳ ಕಾಲ OPEC ಸದಸ್ಯ ರಾಷ್ಟ್ರವಾಗಿದ್ದ ಯುಎಇನ ಈ ನಡೆ, ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಹೊಸ ಲೆಕ್ಕಾಚಾರಗಳಿಗೆ ಕಾರಣವಾಗಬಹುದು ಎನ್ನಲಾಗಿದೆ.

ತೈಲ ಉತ್ಪಾದನೆಗೆ ವಿಧಿಸಲಾಗುತ್ತಿರುವ ಮಿತಿಗಳು ಹಾಗೂ ತನ್ನ ದೀರ್ಘಕಾಲೀನ ಆರ್ಥಿಕ ಗುರಿಗಳಿಗೆ ಅಡ್ಡಿಯಾಗುತ್ತಿರುವ ನಿಯಮಗಳು ಈ ನಿರ್ಧಾರದ ಹಿಂದೆ ಪ್ರಮುಖ ಕಾರಣಗಳಾಗಿವೆ ಎಂದು ವರದಿಗಳು ಸೂಚಿಸುತ್ತಿವೆ. ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿ ರಫ್ತು ಪ್ರಮಾಣ ವಿಸ್ತರಿಸುವ ಯೋಜನೆ ಹೊಂದಿರುವ ಯುಎಇ, ಸ್ವತಂತ್ರ ಕಾರ್ಯತಂತ್ರದತ್ತ ಹೆಜ್ಜೆ ಇಡಲು ಮುಂದಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ:

ಇತ್ತೀಚಿನ ಅವಧಿಯಲ್ಲಿ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ರಾಜಕೀಯ ಮತ್ತು ಆರ್ಥಿಕ ಬದಲಾವಣೆಗಳೂ ಈ ನಿರ್ಧಾರಕ್ಕೆ ಪೂರಕವಾಗಿವೆ ಎಂಬ ಚರ್ಚೆ ಜೋರಾಗಿದೆ. ಜಾಗತಿಕ ಅಸ್ಥಿರತೆಯ ನಡುವೆಯೂ ತೈಲ ಉತ್ಪಾದನೆ ನಿರ್ವಹಣೆಯಲ್ಲಿ ಒಪೆಕ್‌ ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಅಸಮಾಧಾನವೂ ವ್ಯಕ್ತವಾಗಿದೆ.

ಯುಎಇನ ಈ ನಿರ್ಧಾರ ಮುಂದಿನ ದಿನಗಳಲ್ಲಿ ತೈಲ ಬೆಲೆ, ಉತ್ಪಾದನಾ ಸಮತೋಲನ ಹಾಗೂ ಜಾಗತಿಕ ಇಂಧನ ರಾಜಕಾರಣದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !