ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಭಾರತದಾದ್ಯಂತ ಮಳೆಯಬ್ಬರ ಮುಂದುವರೆದಿದ್ದು, ಜನಜೀವನ ತತ್ತರಿಸಿ ಹೋಗಿದೆ. ಮೇಘಸ್ಫೋಟ, ಭೂಕುಸಿತ, ಪ್ರವಾಹದಿಂದಾಗಿ 100ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಇನ್ನೂ ಹಲವರು ಕಾಣೆಯಾಗಿದ್ದಾರೆ. ಈ ಹಿನ್ನೆಲೆ ವಿಶೇಷ ಪ್ಯಾಕೇಜ್ ಘೋಷಿಸಲು ಕೇಂದ್ರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಇತ್ತೀಚಿಗೆ ಉತ್ತರಾಖಂಡದಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಇದಕ್ಕೂ ಮುನ್ನ ಆಗಸ್ಟ್‌ನಲ್ಲಿ ಉಂಟಾದ ಸರಣಿ ಮೇಘಸ್ಫೋಟ, ಭೂಕುಸಿತ ಮತ್ತು ಹಠಾತ್ ಪ್ರವಾಹದಿಂದಾಗಿ 69 ಜನರು ಕಾಣೆಯಾಗಿದ್ದಾರೆ. ಹಲವು ಮನೆಗಳು ನಾಶವಾಗಿ ಪ್ರಾಣಿಗಳು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿವೆ. ಸದ್ಯ ಹವಾಮಾನ ಇಲಾಖೆ ಉತ್ತರಾಖಂಡಕ್ಕೆ ರೆಡ್ ಅಲರ್ಟ್ ಘೋಷಿಸಿದೆ.
ಮಳೆಗೆ ತತ್ತರಿಸಿದ ಉತ್ತರ ಭಾರತಕ್ಕೆ ವಿಶೇಷ ಪ್ಯಾಕೇಜ್ ನೀಡಿ: ಸರ್ಕಾರಕ್ಕೆ ಖರ್ಗೆ ಆಗ್ರಹ
